ಬುಧವಾರ, ಆಗಸ್ಟ್ 4, 2021
26 °C

ಅತ್ಯಾಚಾರ ಆರೋಪಿಗೆ ಸೋಂಕು; 60 ಪೊಲೀಸರು ಕ್ವಾರಂಟೈನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಅತ್ಯಾಚಾರ ಆರೋಪದಡಿ ಛತ್ತೀಸ್‌ಗಡ ರಾಜ್ಯದ ಬಿಲಾಸ್‌ಪುರ ಪೊಲೀಸರಿಂದ ಇಲ್ಲಿನ ಹೂಟಗಳ್ಳಿಯಲ್ಲಿ ಬಂಧನಕ್ಕೆ ಒಳಗಾದ 28 ವರ್ಷ ವ್ಯಕ್ತಿಯೊಬ್ಬರಿಗೆ ಕೋವಿಡ್‌–19 ಇರುವುದು ದೃಢಪಟ್ಟಿದೆ. ಹೀಗಾಗಿ, ಬಿಲಾಸ್‌ಪುರದ 60 ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿದೆ.

ಕಳೆದ ತಿಂಗಳು ಆ ರಾಜ್ಯದ ಯುವತಿಯೊಬ್ಬರು ಈ ವ್ಯಕ್ತಿಯ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು.

‘ಪ್ರಕರಣ ಸಂಬಂಧ 5 ದಿನಗಳ ಹಿಂದೆ ಇಲ್ಲಿಗೆ ಬಂದ ನಾಲ್ವರು ಪೊಲೀಸರು ಹೂಟಗಳ್ಳಿಯ ಈ ವ್ಯಕ್ತಿಯ ನಿವಾಸವನ್ನು ಪತ್ತೆ ಹಚ್ಚಿದ್ದಾರೆ. ನಂತರ, ಬಂಧಿಸಿ ಬಿಲಾಸ್‌ಪುರಕ್ಕೆ ಕರೆದುಕೊಂಡು ಹೋಗಿದ್ದಾರೆ. ಆರೋಪಿಯನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಿದ್ದು, ವರದಿ ಪಾಸಿಟಿವ್‌ ಬಂದಿದೆ. ಪ್ರಾಥಮಿಕ ಸಂಪರ್ಕಿತ ಪೊಲೀಸರನ್ನು ಕ್ವಾರಂಟೈನ್‌ನಲ್ಲಿ ಇಡಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು