ಶನಿವಾರ, ಜನವರಿ 16, 2021
17 °C

ಎಸಿಎಫ್ ಶಿವಶಂಕರ್ ಮನೆ ಮೇಲೆ ಎಸಿಬಿ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಇಲ್ಲಿನ ಎಸಿಎಫ್ ಶಿವಶಂಕರ್‌ ಅವರ ನಿವಾಸ ಕಚೇರಿ ಸೇರಿದಂತೆ ಒಟ್ಟು 5 ಕಡೆ ಶುಕ್ರವಾರ ಬೆಳಿಗ್ಗೆ ದಾಳಿ ನಡೆಸಿರುವ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ದಾಖಲಾತಿಗಳ ಪರಿಶೀಲನೆ ನಡೆಸಿದ್ದಾರೆ.

ಎಸಿಬಿ ಎಸ್ ಪಿ ಸುಮನ್ ಡಿ ಪನೆಕರ್ ಹಾಗೂ ಡಿವೈಎಸ್ ಪಿ ಎಚ್ ಪರಶುರಾಮಪ್ಪ ನೇತೃತ್ವದಲ್ಲಿ ದಾಳಿ ನಡೆದಿದೆ.

ಅರಣ್ಯ ಇಲಾಖೆಯ ಸ್ಯಾಂಡಲ್ ಡಿಪೊದಲ್ಲಿ ಇವರು ಎಸಿಎಫ್ ಆಗಿದ್ದಾರೆ. ಇವರ ನಿವಾಸ, ಕಚೇರಿ, ಸಂಬಂಧಿಕರು ಹಾಗೂ ಸ್ನೇಹಿತರ ನಿವಾಸ, ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿರುವ ಇವರ ಮನೆಯ ಮೇಲೆ ಎಸಿಬಿಯ 40ಕ್ಕೂ ಹೆಚ್ಚಿನ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಕುರಿತ ದೂರಿನ ಅನ್ವಯ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು