ಸೋಮವಾರ, ಏಪ್ರಿಲ್ 6, 2020
19 °C

ವಿವರ ಬಹಿರಂಗ: ಇಬ್ಬರ ವಿರುದ್ಧ ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಕೋವಿಡ್‌–19 ದೃಢಪಟ್ಟ ವ್ಯಕ್ತಿಯ ಗುರುತು ಬಹಿರಂಗಪಡಿಸಿದ ಇಲ್ಲಿನ ಕೆ.ಆರ್‌.ಆಸ್ಪತ್ರೆಯ ಒಬ್ಬ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದ್ದು, ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇನ್ನೊಬ್ಬನನ್ನು ಕೆಲಸದಿಂದ ವಜಾ ಮಾಡಲಾಗಿದೆ.

ದುಬೈನಿಂದ ಮೈಸೂರಿಗೆ ಬಂದಿದ್ದ ವ್ಯಕ್ತಿಗೆ ಕೋವಿಡ್‌–19 ಇರುವುದು ಶನಿವಾರ ದೃಢಪಟ್ಟಿತ್ತು. ಆ ವ್ಯಕ್ತಿಯ ಹೆಸರು, ವಿಳಾಸ ಒಳಗೊಂಡಂತೆ ವೈದ್ಯಕೀಯ ಪರೀಕ್ಷೆಯ ವರದಿಯನ್ನು ವಾಟ್ಸ್‌ಆ್ಯಪ್‌ನಲ್ಲಿ ಬಹಿರಂಗಪಡಿಸಲಾಗಿತ್ತು.

‘ಇಬ್ಬರ ವಿರುದ್ಧವೂ ಪೊಲೀಸರಿಗೆ ದೂರು ನೀಡುವಂತೆ ಕೆ.ಆರ್‌.ಆಸ್ಪತ್ರೆಯ ಡೀನ್‌ಗೆ ಸೂಚಿಸಲಾಗಿತ್ತು. ಅವರು ನೀಡಿದ ದೂರಿನಂತೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್‌ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)