ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿವಾರ, ತಳವಾರ ಅಧಿಸೂಚನೆ ಜಾರಿಗೆ ಶೀಘ್ರವೇ ಕ್ರಮ: ಸಚಿವ ರಮೇಶ್ ಜಾರಕಿಹೊಳಿ

Last Updated 28 ಮೇ 2020, 10:19 IST
ಅಕ್ಷರ ಗಾತ್ರ

ಮೈಸೂರು: ‘ಪರಿವಾರ ಮತ್ತು ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರ ಸರ್ಕಾರ ಅಧಿಸೂಚ‌ನೆ ಹೊರಡಿಸಿದ್ದು, ಈ ಸಂಬಂಧ ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ಜೊತೆ ಶನಿವಾರ ಸಭೆ ನಡೆಸಿ, ರಾಜ್ಯದಲ್ಲೂ ಈ ಅಧಿಸೂಚನೆ ಜಾರಿಗೊಳಿಸಲು ಕ್ರಮ ವಹಿಸಲಾಗುವುದು’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು.

ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಗುರುವಾರ ಮೈಸೂರು, ಚಾಮರಾಜನಗರ ಜಿಲ್ಲೆಯ ನಾಯಕ ಸಮಾಜದ ಮುಖಂಡರು ಹಾಗೂ ವಿವಿಧ ಗ್ರಾಮದ ಯಜಮಾನರೊಂದಿಗೆ ನಡೆದ ಸಮಾಲೋಚನಾ ಸಭೆಯಲ್ಲಿ ಸಚಿವರು ಈ ಭರವಸೆ ನೀಡಿದರು.

ಪರಿಶಿಷ್ಟ ಜಾತಿ, ಪಂಗಡ ಸಮುದಾಯದ ರೈತರು ಕೃಷಿ ಚಟುವಟಿಕೆಗಳಿಗೆ ಸರ್ಕಾರದಿಂದ ದೊರಕುವ ಎಲ್ಲಾ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ರಮೇಶ ಜಾರಕಿಹೊಳಿ ಇದೇ ಸಂದರ್ಭ ಸಲಹೆ ನೀಡಿದರು.

‘ಜಿಲ್ಲೆಯಲ್ಲಿ ಮಹಾರಾಜರ ಕಾಲದಿಂದಲೂ ಇರುವ ಕೆರೆಗಳಿಗೆ ನೀರು ತುಂಬಿಸುವ ಮೂಲಕ ಕೃಷಿ ಚಟುವಟಿಕೆ ನಡೆಸಲು ಅನುಕೂಲವಾಗುವಂತೆ ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು. ಜನರಿಗೆ ಕುಡಿಯುವ ನೀರಿಗೆ ತೊಂದರೆ ಉಂಟಾಗದಂತೆ ಸೂಕ್ತ ವ್ಯವಸ್ಥೆ ರೂಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು’ ಎಂದು ಭರವಸೆ ನೀಡಿದರು.

ಸಂಸದ ಪ್ರತಾಪ ಸಿಂಹ, ವಿಧಾನ ಪರಿಷತ್‌ನ ಮಾಜಿ ಸದಸ್ಯ ಸಿದ್ದರಾಜು ಹಾಗೂ ಸಮಾಜದ ಮುಖಂಡರು ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT