ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಕ್ರಿಯ ಪ್ರಕರಣ ಸಾವಿರಕ್ಕೂ ಕಡಿಮೆ

Last Updated 13 ನವೆಂಬರ್ 2020, 2:10 IST
ಅಕ್ಷರ ಗಾತ್ರ

ಮೈಸೂರು: ಜಿಲ್ಲೆಯಲ್ಲಿ ಕೋವಿಡ್‌ನಿಂದ 174 ಮಂದಿ ಗುಣಮುಖರಾಗಿದ್ದು, ಕಳೆದ 2–3 ತಿಂಗಳಲ್ಲಿ ಇದೇ ಮೊದಲ ಬಾರಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ ಸಾವಿರಕ್ಕಿಂತ ಕೆಳಗೆ ಇಳಿದಿದೆ. ಇದೀಗ 994 ಸಕ್ರಿಯ ಪ್ರಕರಣಗಳು ಇವೆ.

ರಾಜ್ಯದಲ್ಲಿ ಬೆಂಗಳೂರು ನಗರ (17,942), ಬೆಂಗಳೂರು ಗ್ರಾಮಾಂತರ (1,152) ಮತ್ತು ತುಮಕೂರು (1,017) ಜಿಲ್ಲೆಗಳಲ್ಲಿ ಮಾತ್ರ ಸಾವಿರಕ್ಕೂ ಅಧಿಕ ಸಕ್ರಿಯ ಪ್ರಕರಣಗಳು ಇವೆ.

ಇದೇ ವೇಳೆ 115 ಹೊಸ ಪ್ರಕರಣಗಳು ವರದಿಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 49,212ಕ್ಕೆ ಏರಿಕೆಯಾಗಿದೆ.

ಆರೋಗ್ಯ ಇಲಾಖೆಯ ಗುರುವಾರದ ವರದಿ ಪ್ರಕಾರ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಕೋವಿಡ್‌ಗೆ ಇದುವರೆಗೆ ಒಟ್ಟು 976 ಮಂದಿ ಮೃತಪಟ್ಟಿದ್ದಾರೆ.

ರೋಗಿಗಳ ಸಂಪರ್ಕಕ್ಕೆ ಬಂದ 78 ಮಂದಿ, ಶೀತ ಜ್ವರ ಮಾದರಿಯ ಅನಾರೋಗ್ಯ ಲಕ್ಷಣದಿಂದ (ಐಎಲ್‌ಐ) ಬಳಲುತ್ತಿದ್ದ 26 ಮಂದಿ, ತೀವ್ರ ಉಸಿರಾಟ ಸಮಸ್ಯೆಯಿಂದ (ಎಸ್‌ಎಆರ್‌ಐ) ಬಳಲುತ್ತಿದ್ದ ಇಬ್ಬರು ಹಾಗೂ ಇತರ 9 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

396 ಮಂದಿ ಮನೆಯಲ್ಲೇ ಐಸೊಲೇಷನ್‌ ಆಗಿದ್ದಾರೆ. ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ 96 ಮಂದಿ, ಖಾಸಗಿ ಆಸ್ಪತ್ರೆಗಳಲ್ಲಿ 267 ಮಂದಿ, ಕೋವಿಡ್‌ ಚಿಕಿತ್ಸಾ ಕೇಂದ್ರದಲ್ಲಿ 76, ಖಾಸಗಿ ಕೋವಿಡ್‌ ಚಿಕಿತ್ಸಾ ಕೇಂದ್ರದಲ್ಲಿ 79, ಕೋವಿಡ್‌ ಕೇರ್‌ ಕೇಂದ್ರದಲ್ಲಿ 76, ಖಾಸಗಿ ಕೋವಿಡ್‌ ಕೇರ್‌ ಕೇಂದ್ರದಲ್ಲಿ 4 ಮಂದಿ ಆರೈಕೆ ಪಡೆಯುತ್ತಿದ್ದಾರೆ.

ಒಟ್ಟು 3,88,276 ಕೋವಿಡ್‌ ಪರೀಕ್ಷೆಗಳನ್ನು ಮಾಡಲಾಗಿದೆ. 7,052 ಮಂದಿ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ ಎಂದು ಜಿಲ್ಲಾಡಳಿತದ ಮಾಹಿತಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT