ಬುಧವಾರ, ಜುಲೈ 6, 2022
23 °C

ಆದಿವಾಸಿಗಳ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಗುಂಡಿನ ದಾಳಿ: ನಟ ಚೇತನ್ ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಪಿರಿಯಾಪಟ್ಟಣದ ರಾಣಿಗೇಟ್ ಹಾಡಿಯ ಆದಿವಾಸಿ ಸಮುದಾಯಕ್ಕೆ ಸೇರಿದ ಬಸವ ಎಂಬುವವರು ಬಹಿರ್ದೆಸೆಗೆ ಹೋಗಿದ್ದಾಗ ಅರಣ್ಯ ಇಲಾಖೆಯ ವಾಚರ್ ಸುಬ್ರಹ್ಮಣ್ಯ ಎಂಬುವವರು ಗುಂಡು ಹಾರಿಸಿದ್ದಾರೆ. ಗಾಯಗೊಂಡ ಬಸವ ಅವರನ್ನು ಕೆ‌.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ‌.

ಪೊಲೀಸರು ಗಾಯಗೊಂಡಿರುವ ಬಸವ ಅವರ ಮೇಲೆಯೆ ಪ್ರಕರಣ ದಾಖಲಿಸಿದ್ದು, ಪ್ರತಿದೂರನ್ನು ಸ್ವೀಕರಿಸುತ್ತಿಲ್ಲ ಎಂದು ನಟ ಚೇತನ್ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಗುರುವಾರ ಆಕ್ರೋಶ ವ್ಯಕ್ತಪಡಿಸಿದರು.

ಆದಿವಾಸಿಗಳ ಮೇಲಿನ ದೌರ್ಜನ್ಯ ನಿಲ್ಲಬೇಕು. ಅವರಿಗೆ ನ್ಯಾಯ ಸಿಗಬೇಕು. ಈ ಕುರಿತು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು ಎಂದರು.

ಇದನ್ನೂ ಓದಿ... ಯುವಕರು ಎಷ್ಟು ದಿನ ತಾಳ್ಮೆಯಿಂದಿರಬೇಕು: ನಿರುದ್ಯೋಗದ ಬಗ್ಗೆ ವರುಣ್ ಗಾಂಧಿ ಹೇಳಿಕೆ

ಗಂಧದ ಮರ ಕತ್ತರಿಸಿ ಸಾಗಿಸುವ ವೇಳೆ ಗುಂಡಿನ ದಾಳಿ: ಅರಣ್ಯ ಇಲಾಖೆ ಸ್ಪಷ್ಟನೆ
ಪಿರಿಯಾಪಟ್ಟಣದ ರಾಣಿಗೇಟ್ ಹಾಡಿನ ನಿವಾಸಿ‌ ಬಸವ ಎಂಬ ಆದಿವಾಸಿಯು ಇತರ ಇಬ್ಬರೊಂದಿಗೆ ಸೇರಿಕೊಂಡು ಗಂಧದ ಮರವನ್ನು ಕಡಿದು, ಸಾಗಿಸುವ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿನ ದಾಳಿ ನಡೆಸಿದ್ದಾರೆ ಎಂದು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಹೇಶ್ ಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಘಟನೆಯಲ್ಲಿ  ಅರಣ್ಯ ಇಲಾಖೆಯ ಮೂವರು ಸಿಬ್ಬಂದಿಯೂ ಗಾಯಗೊಂಡು ಚಿಕಿತ್ಸೆ ಪಡೆದಿದ್ದಾರೆ. ಆರೋಪಿಗಳಿಂದ ಗಂಧದ ಮರಗಳನ್ನು ವಶಪಡಿಸಿಕೊಂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು