ಶನಿವಾರ, ಮೇ 15, 2021
25 °C

ಗುಣಮುಖರಾಗುತ್ತಿರುವ ನಟರು; ದೇವರಾಜ್, ಪ್ರಜ್ವಲ್ ಆಸ್ಪತ್ರೆಯಿಂದ ಮನೆಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ದೇವರಾಜ್, ದರ್ಶನ್, ಪ್ರಜ್ವಲ್ ದೇವರಾಜ್ ಹಾಗೂ ರಾಯ್ ಅಂಥೋಣಿಯಂ ಗುಣಮುಖರಾಗುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಮಂಗಳವಾರ ಮಧ್ಯಾಹ್ನ ದೇವರಾಜ್ ಮತ್ತು ಪ್ರಜ್ವಲ್ ದೇವರಾಜ್ ಅವರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು. ದರ್ಶನ್ ಅವರು ಇನ್ನು ಒಂದು ದಿನ ಆಸ್ಪತ್ರೆಯಲ್ಲೇ ಚಿಕಿತ್ಸೆ ತೆಗೆದುಕೊಳ್ಳಬೇಕಿದ್ದು, ಬುಧವಾರ ಸಂಜೆ ಹೊತ್ತಿಗೆ ಮನೆಗೆ ತೆರಳುವ ನಿರೀಕ್ಷೆ ಇದೆ.

ಅಪಘಾತ ನಡೆದ ದಿನ ದೇವರಾಜ್ ಅವರ ಜನ್ಮ ದಿನದ ಔತಣಕೂಟವು ಖಾಸಗಿ ಹೋಟೆಲ್‌ವೊಂದರಲ್ಲಿ ಆಯೋಜನೆಗೊಂಡಿತ್ತು ಎಂಬ ಸುದ್ದಿ ಹೆಚ್ಚು ಬಲವಾಗುತ್ತಿದೆ. ದೇವರಾಜ್ ಅವರು ಕೇಕ್ ಕತ್ತರಿಸಿ ಹಂಚುತ್ತಿರುವ ದೃಶ್ಯಗಳಿರುವ ವಿಡಿಯೊ ತುಣುಕುಗಳು ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡುತ್ತಿವೆ. ನಟ ಸೃಜನ್ ಲೋಕೇಶ್ ಸಹ ಔತಣಕೂಟ ಮುಗಿಸಿ ಕೆಂಗೇರಿವರಗೆ ಹೋಗಿದ್ದರು. ಅಪಘಾತದ ಸುದ್ದಿ ತಿಳಿದು ವಾಪಸ್ಸಾದರು ಎಂದು ಮೂಲಗಳು ತಿಳಿಸಿವೆ.

ಆಸ್ಪತ್ರೆಗೆ ದರ್ಶನ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಇವರಿಗೆ ಪ್ರವೇಶ ನಿರಾಕರಿಸಲಾಗುತ್ತಿದೆ.


ಜನ್ಮ ದಿನದ ಕೂಟದಲ್ಲಿ ದೇವರಾಜ್

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು