ಭಾನುವಾರ, ಮೇ 29, 2022
30 °C

ಅನೈತಿಕ ಸಂಬಂಧ ಶಂಕೆ: ಪತಿಯನ್ನು ಕೊಲೆ ಮಾಡಿದ ಪತ್ನಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸರಗೂರು: ತಾಲ್ಲೂಕಿನ ಮುಳ್ಳೂರು ಗ್ರಾಮದ ಬಸವರಾಜು(41) ಎಂಬುವವರನ್ನು ಅವರ ಪತ್ನಿ ನೇತ್ರಾವತಿ ಶುಕ್ರವಾರ ಕೊಲೆ ಮಾಡಿದ್ದು, ಶನಿವಾರ ಬೆಳಕಿಗೆ ‌ಬಂದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪತಿಯು ಬೇರೊಬ್ಬ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದರು ಎಂಬ ಶಂಕೆಯ ಕಾರಣಕ್ಕೆ ಇಬ್ಬರ ನಡುವೆಯೂ ಜಗಳ ನಡೆಯುತ್ತಿತ್ತು. ರಾತ್ರಿ ಜಗಳ ತಾರಕಕ್ಕೇರಿ ಪತ್ನಿಯು ಪತಿಯ ಮರ್ಮಾಂಗಕ್ಕೆ ಹೊಡೆದು ಕೊಲೆ ಮಾಡಿದ್ದಾಳೆಂದು ಪೊಲೀಸರು ತಿಳಿಸಿದ್ದಾರೆ.

ಬಸವರಾಜು ಸಹೋದರ ಗುರುಸ್ವಾಮಿ ಸರಗೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು