ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲ್ಯಾಬ್‌ಲ್ಯಾಂಡ್ ಬಯೋಟೆಕ್–ನಿಟ್ಟೆ ನಡುವೆ ಒಪ್ಪಂದ

Last Updated 9 ಜುಲೈ 2021, 2:57 IST
ಅಕ್ಷರ ಗಾತ್ರ

ಮೈಸೂರು: ಸಸ್ಯ ಜೀವತಂತ್ರಜ್ಞಾನ ಕ್ಷೇತ್ರದಲ್ಲಿ ಪ್ರಸಿದ್ಧವಾಗಿರುವ ಮೈಸೂರಿನ ಲ್ಯಾಬ್‌ಲ್ಯಾಂಡ್ ಬಯೋಟೆಕ್ ಪ್ರೈವೇಟ್ ಲಿಮಿಟೆಡ್ ಹಾಗೂ ಮಂಗಳೂರಿನ ದೇರಳಕಟ್ಟೆಯ ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯವು ಶಿಕ್ಷಣ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಜತೆಯಾಗಿ ಕಾರ್ಯನಿರ್ವಹಿಸುವ ಒಡಂಬಡಿಕೆ ಮಾಡಿಕೊಂಡಿವೆ.

ಔಷಧೀಯ ಗುಣವುಳ್ಳ ಸಸ್ಯಗಳು, ಅಂಗಾಂಶ ಅಭಿವೃದ್ಧಿ, ಕ್ಲಿನಿಕಲ್ ಸಂಶೋಧನೆ, ಅಣುಬೀಜ ಜೀವವಿಜ್ಞಾನ, ಜೀವಮಾಹಿತಿ ವಿಜ್ಞಾನ, ಜೀವ ಅಂಕಿ-ಅಂಶ ವಿಜ್ಞಾನ, ತಂತ್ರಜ್ಞಾನ ಅಭಿವೃದ್ಧಿ ಹಾಗೂ ಬಯೋ ಇಂಧನ ಕ್ಷೇತ್ರಗಳಲ್ಲಿ ಜಂಟಿಯಾಗಿ ಸಂಶೋಧನೆ ನಡೆಸಲು ಉದ್ದೇಶಿಸಲಾಗಿದೆ.

ಒಡಂಬಡಿಕೆ ಪತ್ರಕ್ಕೆ ಸಹಿ ಹಾಕುವ ಕಾರ್ಯಕ್ರಮದಲ್ಲಿ ಲ್ಯಾಬ್‌ಲ್ಯಾಂಡ್ ಬಯೋಟೆಕ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಅಧ್ಯಕ್ಷ ಡಾ.ಸುಧೀರ್ ಶೆಟ್ಟಿ, ನಿಟ್ಟೆ ಪರಿಗಣಿಸಲ್ಪಟ್ಟ ವಿ.ವಿ ಕುಲಪತಿ ಡಾ.ಸತೀಶ್ ಕುಮಾರ್ ಭಂಡಾರಿ, ಸಹ ಕುಲಪತಿ ಡಾ.ಎಂ.ಎಸ್.ಮೂಡಿತ್ತಾಯ, ಕುಲಸಚಿವ ಡಾ.ಅಲ್ಕಾ ಕುಲಕರ್ಣಿ, ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕ ಡಾ.ಪ್ರವೀಣ್ ಕುಮಾರ್ ಶೆಟ್ಟಿ, ಜೀವರಸಾಯನ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ.ಎನ್.ಸುಚೇತಾ ಕುಮಾರಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT