ಶುಕ್ರವಾರ, ಜುಲೈ 1, 2022
28 °C

ಮೈಸೂರು: ಕೃಷಿ ಕ್ಷೇತ್ರದಲ್ಲಿ ಬಳಸುವ ಡ್ರೋನ್‌ಗಳ ಪ್ರಾತ್ಯಕ್ಷಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಬೆಳೆಗಳಿಗೆ ಗೊಬ್ಬರ ಹಾಗೂ ಕೀಟನಾಶಕ ಸಿಂಪಡಿಸುವಂತಹ ಡ್ರೋನ್‌ ಪ್ರಾತ್ಯಕ್ಷಿಕೆಯನ್ನು ಕೇಂದ್ರ ಸಚಿವರಾದ ಡಾ.ಜಿತೇಂದ್ರ ಸಿಂಗ್ ಹಾಗೂ ಶೋಭಾ ಕರಾಂದ್ಲಾಜೆ ಅವರು ಶುಕ್ರವಾರ ಮೈಸೂರಿನ ಸಿಎಫ್‌ಟಿಆರ್‌ಐ ಆವರಣದಲ್ಲಿ ವೀಕ್ಷಿಸಿದರು.

ಈ ಡ್ರೋನ್‌ಗಳಿಂದ  10 ನಿಮಿಷದ ಅವಧಿಯಲ್ಲಿ ಬೆಳೆಗಳಿಗೆ ಗೊಬ್ಬರ ಹಾಗೂ ಕೀಟನಾಶಕಗಳನ್ನು ಸಿಂಪಡಿಸಬಹುದು ಎಂದು ಚೆನ್ನೈನ ಗರುಡ ಏರೋಸ್ಪೇಸ್ ಕಂಪನಿಯ ರೈಸ್ ತಿಳಿಸಿದರು.

ಇದಕ್ಕೂ ಮುನ್ನ ಇಬ್ಬರು ಸಚಿವರು ಇಲ್ಲಿ ಲಘು ಉದ್ಯೋಗ ಭಾರತಿ– ಕರ್ನಾಟಕ, ಐಎಂಎಸ್‌ ಫೌಂಡೇಶನ್‌ ವತಿಯಿಂದ ಸಿಎಸ್‌ಐಆರ್‌– ಸಿಎಫ್‌ಟಿಆರ್‌ಐ ಸಹಯೋಗದಲ್ಲಿ ನಡೆಯುತ್ತಿರುವ ಮೂರನೇ ಆವೃತ್ತಿಯ ‘ಟೆಕ್‌ ಭಾರತ್–2022’ ತಂತ್ರಜ್ಞಾನ ವಸ್ತುಪ್ರದರ್ಶನ ಮತ್ತು ಸಮಾವೇಶದಲ್ಲಿ ಭಾಗಿಯಾದರು‌.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.