ಶುಕ್ರವಾರ, ಅಕ್ಟೋಬರ್ 18, 2019
20 °C

ಟೋಕಿಯೊ ಪ್ಯಾರಾಲಿಂಪಿಕ್ಸ್‌ ಅರ್ಹತೆ ಗುರಿ: ಮಾನಸಿ

Published:
Updated:
Prajavani

ಮೈಸೂರು: ‘ಟೋಕಿಯೊ ಪ್ಯಾರಾಲಿಂಪಿಕ್ಸ್‌ಗೆ ಅರ್ಹತೆ ಪಡೆಯುವುದು ನನ್ನ ಗುರಿ’ ಎಂದು ಪ್ಯಾರಾ ಬ್ಯಾಡ್ಮಿಂಟನ್‌ ಆಟಗಾರ್ತಿ ಮಾನಸಿ ಜೋಷಿ ಹೇಳಿದರು.

‘ನಾನು ಈಗ ಆಡುತ್ತಿರುವ ವಿಭಾಗದ (ಎಸ್‌ಎಲ್‌–3) ಸ್ಪರ್ಧೆ ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಸ್ಥಾನ ಪಡೆದಿಲ್ಲ. ಆದ್ದರಿಂದ ಮಿಶ್ರ ಡಬಲ್ಸ್‌ ವಿಭಾಗದಲ್ಲಿ ಆಡಿ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಬೇಕೆಂದಿದ್ದೇನೆ. ಅದು ಕಠಿಣ ಹಾದಿ ಎಂಬುದು ತಿಳಿದಿದೆ. ಆದರೂ ಶಕ್ತಿಮೀರಿ ಪ್ರಯತ್ನಿಸುತ್ತೇನೆ’ ಎಂದರು.

‘ಮುಂದಿನ ವಾರ ಡೆನ್ಮಾರ್ಕ್‌ನಲ್ಲಿ ನಡೆಯಲಿರುವ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿದ್ದು, ಉತ್ತಮ ಪ್ರದರ್ಶನ ನೀಡುವ ವಿಶ್ವಾಸವಿದೆ’ ಎಂದು ಹೇಳಿದರು.

ದಸರಾ ಉತ್ಸವದ ಅಂಗವಾಗಿ ಆಯೋಜಿಸಿದ್ದ ಹಾಫ್‌ ಮ್ಯಾರಥಾನ್‌ ಸ್ಪರ್ಧೆಗೆ ಚಾಲನೆ ನೀಡಲು ಅವರು ಭಾನುವಾರ ಮೈಸೂರಿಗೆ ಬಂದಿದ್ದರು.

ಸ್ವಿಟ್ಜರ್‌ಲೆಂಡ್‌ನ ಬಾಸೆಲ್‌ನಲ್ಲಿ ಇತ್ತೀಚೆಗೆ ನಡೆದಿದ್ದ ವಿಶ್ವ ಪ್ಯಾರಾ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನಲ್ಲಿ ಮಾನಸಿ ಸಿಂಗಲ್ಸ್‌ ವಿಭಾಗದಲ್ಲಿ ಚಿನ್ನ ಗೆದ್ದು ಸುದ್ದಿಯಾಗಿದ್ದರು.

Post Comments (+)