ಗುರುವಾರ , ಫೆಬ್ರವರಿ 20, 2020
23 °C

ಅನಂತಕುಮಾರ್‌ ಹೆಗಡೆ ವಿರುದ್ಧ ಪೊಲೀಸರಿಗೆ ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಸಂಸದ ಅನಂತಕುಮಾರ್‌ ಹೆಗಡೆ ಮೇಲೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಕಾಂಗ್ರೆಸ್ ಜಿಲ್ಲಾ ಮತ್ತು ನಗರ ಘಟಕದ ವತಿಯಿಂದ ನಗರ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ ಅವರಿಗೆ ಸೋಮವಾರ ದೂರು ಸಲ್ಲಿಸಲಾಯಿತು.

ಮಹಾತ್ಮ ಗಾಂಧಿ ಅವರನ್ನು ಕುರಿತು ಅನಂತಕುಮಾರ್‌ಹೆಗಡೆ ನೀಡಿರುವ ಹೇಳಿಕೆಯಿಂದ ರಾಜ್ಯದ ಜನತೆಗೆ ನೋವಾಗಿದೆ. ಇವರ ಹೇಳಿಕೆಗಳು ದೇಶದಲ್ಲಿ ಗೊಂದಲ ಮೂಡಿಸುತ್ತವೆ. ಹೀಗಾಗಿ, ಇವರ ವಿರುದ್ಧ ಗೂಂಡಾ ಕಾಯ್ದೆ ದಾಖಲಿಸಬೇಕು ಎಂದು ಕಾಂಗ್ರೆಸ್‌ನ ಜಿಲ್ಲಾ (ಗ್ರಾಮಾಂತರ) ಘಟಕದ ಅಧ್ಯಕ್ಷ ಬಿ.ಜೆ.ವಿಜಯಕುಮಾರ್ ದೂರಿನಲ್ಲಿ ತಿಳಿಸಿದ್ದಾರೆ.

ಇದಕ್ಕೂ ಮುನ್ನ ಅನಂತರಕುಮಾರ ಹೆಗಡೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಷ್ಟ್ರಪತಿಯವರಿಗೆ ದೂರನ್ನು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಮೂಲಕ ಇವರು ಸಲ್ಲಿಸಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು