ಶುಕ್ರವಾರ, ಸೆಪ್ಟೆಂಬರ್ 24, 2021
23 °C

ಮೈಸೂರಿನಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಇಲ್ಲಿನ ಆರ್.ಎಸ್.ನಾಯ್ಡು ನಗರದಲ್ಲಿ ವಿದ್ಯಾರ್ಥಿನಿಯೊಬ್ಬರ ಮೇಲೆ ಅತ್ಯಾಚಾರ ನಡೆದಿರುವ ಕುರಿತು ಇಲ್ಲಿನ ಎನ್.ಆರ್.ಠಾಣೆಯಲ್ಲಿ ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಪೊಲೀಸರು ಹೆಡೆಮುರಿಕಟ್ಟಿದ್ದಾರೆ.

‘ಮತ್ತೊಂದು ಅತ್ಯಾಚಾರ’ ಎಂಬ ಸುದ್ದಿ ವ್ಯಾಪಕವಾಗಿ ಹರಡಿ ಆರ್‌.ಎಸ್‌.ನಾಯ್ಡು ನಗರದ ಸ್ಥಳೀಯರಲ್ಲಿ ಭೀತಿಯ ವಾತಾವರಣ ಮೂಡಿಸಿತು. ಸ್ಥಳಕ್ಕೆ ಕೂಡಲೇ ದೌಡಾಯಿಸಿದ ಶ್ವಾನದಳ, ಬೆರಳಚ್ಚು ತಜ್ಞರ ತಂಡ ಪರಿಶೀಲನೆ ನಡೆಸಿತು. ಡಿಸಿಪಿ ಪ್ರದೀಪ್‌ ಗುಂಟಿ, ಗೀತಾ ಪ್ರಸನ್ನ, ಎನ್‌.ಆರ್‌.ಎಸಿಪಿ ಶಿವಶಂಕರ್, ಎನ್‌.ಆರ್.ಠಾಣೆ ಇನ್‌ಸ್ಪೆಕ್ಟರ್ ಅಜರುದ್ದೀನ್ ಹಾಗೂ ಸಿಬ್ಬಂದಿ ಮಿಂಚಿನ ಕಾರ್ಯಾಚರಣೆ ಕೈಗೊಂಡರು. ಪ್ರದೇಶದಲ್ಲಿ ಜನರು ಗುಂಪಾಗಿ ಸೇರಿ ವೀಕ್ಷಿಸಿದರು. ಪೊಲೀಸರು ಕೇಳಿದ ಮಾಹಿತಿಯನ್ನು ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು