ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಪಿಎಂಸಿ ಕಾಯ್ದೆ ತಿದ್ದುಪಡಿ ಏಕೆ? ಬಡಗಲಪುರ ನಾಗೇಂದ್ರ ಪ್ರಶ್ನೆ

Last Updated 16 ಮೇ 2020, 18:04 IST
ಅಕ್ಷರ ಗಾತ್ರ

ಮೈಸೂರು: ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿದ್ದು ಏಕೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಪ್ರಶ್ನಿಸಿದ್ದಾರೆ.‌

ಕಾಯ್ದೆಗೆ ತಿದ್ದುಪಡಿ ತಂದಿರುವುದು ‘ಕದ್ದು ಮುಚ್ಚಿ ಮದುವೆಯಾದಂತೆ’ ಎಂದು ಅವರು ವ್ಯಂಗ್ಯವಾಡಿದ್ದಾರೆ.

ತಿದ್ದುಪಡಿಯಿಂದ ರೈತರಿಗೆ ಆಗುವ ಪ್ರಯೋಜನಗಳ ಕುರಿತು ತಿಳಿಸುವುದೇ ಆದಲ್ಲಿ ರೈತ ಸಂಘವೇ ಸರ್ವಪಕ್ಷಗಳ ಸಭೆ ಕರೆಯುತ್ತದೆ. ಇದಕ್ಕೆ ತಯಾರಿದ್ದೀರಾ ಎಂದು ಸವಾಲು ಹಾಕಿದರು.

ರೈತರು ತಮ್ಮ ಉತ್ಪನ್ನಗಳಿಗೆ ತಾವೇ ಬೆಲೆ ನಿಗದಿ ಮಾಡಿಕೊಳ್ಳುವುದು ಸಾಧ್ಯವೇ ಅಥವಾ ಸ್ವಾಮಿನಾಥನ್ ವರದಿಯ ಆಧಾರದ ಮೇಲೆ ಬೆಲೆ ನಿಗದಿ ಮಾಡಲು ಸಾಧ್ಯವೆ, ಕೃಷಿ ಬೆಲೆ ಆಯೋಗದ ಶಿಫಾರಸ್ಸು ಜಾರಿಗೊಳಿಸಲು ಬದ್ಧರಾಗಿದ್ದೀರಾ ಎಂದು ಪ್ರಕಟಣೆಯಲ್ಲಿ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT