ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಣ್ಯ ಹುತಾತ್ಮರ ದಿನಾಚರಣೆ

Last Updated 11 ಸೆಪ್ಟೆಂಬರ್ 2022, 14:15 IST
ಅಕ್ಷರ ಗಾತ್ರ

ಮೈಸೂರು: ನಗರದ ಅಶೋಕಪುರಂನ ಅರಣ್ಯ ಭವನದ ಆವರಣದಲ್ಲಿರುವ ಲೇ.ವೆಂಕಟಸ್ವಾಮಿ ಉದ್ಯಾನದಲ್ಲಿ ‘ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ–2022’ ಕಾರ್ಯಕ್ರಮ ಭಾನುವಾರ ನಡೆಯಿತು.

ರಾಜ್ಯದ ವಿವಿಧೆಡೆ ಕರ್ತವ್ಯದ ವೇಳೆ ಹುತಾತ್ಮರಾದ 54 ಅರಣ್ಯ ಸಿಬ್ಬಂದಿಯ ಆತ್ಮಕ್ಕೆ ಶಾಂತಿಕೋರಿ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ಎಪಿಸಿಸಿಎಫ್ ಜಗತ್‌ರಾಮ್, ಮೈಸೂರು ವೃತ್ತದ ಸಿಎಫ್ ಡಾ.ಮಾಲತಿ ಪ್ರಿಯಾ, ಡಿಸಿಎಫ್‌ಗಳಾದ ಕಮಲಾ ವಿ.ಕರಿಕಾಳನ್, ಶ್ರೀಧರ್, ಪ್ರಸನ್ನಕುಮಾರ್‌ ಹುತಾತ್ಮರ ಸ್ಮಾರಕಕ್ಕೆ ಹೂಗುಚ್ಛ ಸಮರ್ಪಿಸಿ ಗೌರವ ಸೂಚಿಸಿದರು. ನಂತರ, ಸಾರ್ವಜನಿಕರು, ಮಾಧ್ಯಮದವರು, ಸಾಮಾಜಿಕ ಕ್ಷೇತ್ರಗಳಲ್ಲಿ ತೊಡಗಿಸಿಸಿಕೊಂಡಿರುವ ಒಬ್ಬೊಬ್ಬರು ಗೌರವ ಸಲ್ಲಿಸಿದರು. ಪೊಲೀಸ್ ತುಕಡಿ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸುವ ಮೂಲಕ ಗೌರವಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT