ಸೋಮವಾರ, ಸೆಪ್ಟೆಂಬರ್ 27, 2021
22 °C
ನಂಜನಗೂಡು ತಾಲ್ಲೂಕಿನ ಹಾಡ್ಯ ಪಂಚಾಯಿತಿ ವ್ಯಾಪ್ತಿಯ ಗ್ರಾಮ: ತಾಲ್ಲೂಕು ಆಡಳಿತದಿಂದ ಕ್ರಮ

35 ಪಾಸಿಟಿವ್ ಪ್ರಕರಣ; ಅರಿಯೂರು ಸೀಲ್‌ಡೌನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನಂಜನಗೂಡು: ತಾಲ್ಲೂಕಿನ ಹಾಡ್ಯ ಗ್ರಾ.ಪಂ.ವ್ಯಾಪ್ತಿಯ ಅರಿಯೂರು ಗ್ರಾಮದಲ್ಲಿ ಎರಡು ದಿನಗಳ ಅವಧಿಯಲ್ಲಿ 35 ಮಂದಿಯಲ್ಲಿ ಕೊರೊನಾ ಪತ್ತೆಯಾ ಗಿರುವುದರಿಂದ ತಾಲ್ಲೂಕು ಆಡಳಿತ ಗ್ರಾಮವನ್ನು ಸೀಲ್‌ಡೌನ್ ಮಾಡಿದೆ.

300 ಜನ ಇರುವ ಗ್ರಾಮದ ಪ್ರಮುಖ ಸಂಪರ್ಕ ರಸ್ತೆಗಳನ್ನು ಬಂದ್ ಮಾಡಲಾಗಿದೆ. 10 ದಿನ ಗ್ರಾಮದಿಂದ ಯಾರೂ ಹೊರಗೆ ಹೋಗದಂತೆ ಹಾಗೂ ಗ್ರಾಮಕ್ಕೆ ಯಾರೂ ಬಾರದಂತೆ ನಿರ್ಬಂಧ ವಿಧಿಸಲಾಗಿದೆ.

ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮ ದಲ್ಲಿ ತಪಾಸಣೆ ನಡೆಸಿದಾಗ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ಎರಡು ದಿನಗಳ ಅಂತರದಲ್ಲಿ 24 ಮಂದಿಗೆ ಸೋಂಕು ತಗುಲಿರುವುದು ಮೊದಲಿಗೆ ಪತ್ತೆಯಾಗಿತ್ತು. ಗ್ರಾಮದ ಜನ ಹೆಚ್ಚಾಗಿ ಬೆಂಗಳೂರು ಹಾಗೂ ರಾಮನಗರಗಳಲ್ಲಿ ಕೂಲಿ ಕೆಲಸ ಮಾಡುವವರಾಗಿದ್ದು, ಕೂಲಿಗೆ ತೆರಳಿದ್ದ ವೇಳೆ ಸೋಂಕು ತಗುಲಿದೆ ಎನ್ನಲಾಗಿದೆ. ಗ್ರಾಮಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಧೈರ್ಯ ತುಂಬಿದ್ದಾರೆ. ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಶ್ರೀನಿವಾಸ್ ಸೂಚನೆ ಮೇರೆಗೆ ಹಾಡ್ಯ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಕರಿಯಯ್ಯ ಮತ್ತು ಸಿಬ್ಬಂದಿ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಗ್ರಾಮದಲ್ಲಿದ್ದಾರೆ.

ಶಾಸಕ ಬಿ.ಹರ್ಷವರ್ಧನ್ ಭೇಟಿ: ಶಾಸಕ ಬಿ.ಹರ್ಷವರ್ಧನ್ ಗ್ರಾಮಕ್ಕೆ ಭೇಟಿ ನೀಡಿ, ಆರೋಗ್ಯ ಇಲಾಖೆ ಕೈಗೊಂಡಿರುವ ಕ್ರಮಗಳನ್ನು ಪರಿಶೀಲನೆ ನಡೆಸಿದರು. ಸರ್ಕಾರದ ಮಾರ್ಗಸೂಚಿ ಪಾಲಿಸುವಂತೆ ಸೂಚಿಸಿದರು. ತಾಲ್ಲೂಕಿನಲ್ಲಿ 4 ಕಡೆ ಕೋವಿಡ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಆಂಬುಲೆನ್ಸ್, ಹೆಚ್ಚಿನ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು