ಬುಧವಾರ, ಜೂಲೈ 8, 2020
26 °C
ಜಿಲ್ಲಾಧಿಕಾರಿ ಕಚೇರಿ ಮುಂದೆ ಕಾರ್ಯಕರ್ತೆಯರ ಪ್ರತಿಭಟನೆ

ಆಶಾ ಸಂರಕ್ಷಣಾ ದಿನ; ರಕ್ಷಣೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ‘ಆಶಾ ಸಂರಕ್ಷಣಾ ದಿನ’ದ ಅಂಗವಾಗಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ರಕ್ಷಣೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ದಿನದಿಂದ ದಿನಕ್ಕೆ ಆಶಾ ಕಾರ್ಯಕರ್ತೆಯರ ಮೇಲೆ ಪುಂಡರು ಮತ್ತು ಪಾನಮತ್ತರ ದಾಳಿಗಳು ಹೆಚ್ಚುತ್ತಿವೆ. ಸಮಾಜದ ಒಳಿತಿಗಾಗಿ ಕೆಲಸ ಮಾಡುವ ಕಾರ್ಯಕರ್ತೆಯರಿಗೆ ರಕ್ಷಣೆ ಒದಗಿಸಬೇಕಿದೆ ಎಂದು ಅವರು ಒತ್ತಾಯಿಸಿದರು.

ಆಶಾ ಕಾರ್ಯಕರ್ತೆಯರು ಜೀವ ಭಯದಲ್ಲಿ ಕೆಲಸ ಮಾಡುವಂತಾಗಿದೆ. ಹಲ್ಲೆಕೋರರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಅವರು ಆಗ್ರಹಿಸಿದರು.

ಮಾರ್ಚ್ ತಿಂಗಳಿನಿಂದ ಕೋವಿಡ್–19 ಕಾರ್ಯ ನಿಯೋಜನೆ ಮುಗಿಯುವವರೆಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು. ₹ 10 ಸಾವಿರ ಮಾಸಿಕ ಸಂಭಾವನೆ ನೀಡಬೇಕು ಎಂದು ಮನವಿ ಮಾಡಿದರು.

ಅಗತ್ಯ ಇರುವಷ್ಟು ಮಾಸ್ಕ್, ಸ್ಯಾನಿಟೈಸರ್ ಹಾಗೂ ಗ್ಲೌಸ್‌ಗಳನ್ನು ನೀಡಬೇಕು. ಮದ್ಯ ನಿಷೇಧ ಮಾಡಬೇಕು. ಕೋವಿಡ್‌ ವಿರುದ್ಧ ಹೋರಾಡುತ್ತಿರುವ ಕೊರೊನಾ ವಾರಿಯರ್ಸ್‌ಗೆ ಕಲ್ಪಿಸಿರುವ ₹ 50 ಲಕ್ಷ ವಿಮಾ ಸೌಲಭ್ಯವನ್ನು ಆಶಾ ಕಾರ್ಯಕರ್ತೆಯರಿಗೂ ವಿಸ್ತರಿಸಬೇಕು ಎಂದು ಅವರು ಆಗ್ರಹಿಸಿದರು.‌

ಈ ಕುರಿತ ಬೇಡಿಕೆಗಳಿರುವ ಪತ್ರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರಿಗೆ ಜಿಲ್ಲಾಧಿಕಾರಿ ಮೂಲಕ ಕಾರ್ಯಕರ್ತೆಯರು ಸಲ್ಲಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು