ಬುಧವಾರ, ಜುಲೈ 28, 2021
29 °C

ಗಾಯಗೊಂಡಿದ್ದ ಎಎಸ್‌ಐ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಳಂದೂರು: ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್‌ಐ ಶ್ರೀನಿವಾಸನಾಯಕ ಭಾನುವಾರ ಮೈಸೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಹೃದಯಾಘಾತದಿಂದ ನಿಧನರಾದರು.

ಎರಡು ತಿಂಗಳ ಹಿಂದೆ ಕರ್ತವ್ಯ ಮುಗಿಸಿ, ಪೊಲೀಸ್ ಠಾಣೆಯಿಂದ ದ್ವಿಚಕ್ರದಲ್ಲಿ ಮನೆಗೆ ಹಿಂತಿರುಗುವಾಗ ಮಸೀದಿ ಬಳಿ ಪ್ರಜ್ಞೆ ತಪ್ಪಿ ಬಿದ್ದು ಗಾಯಗೊಂಡಿದ್ದರು ಎನ್ನಲಾಗಿದೆ.

ಇವರಿಗೆ ಪತ್ನಿ, ಪುತ್ರ, ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ.

ಗುಂಡ್ಲುಪೇಟೆ ನಿವಾಸಿಯಾದ ಇವರ ಅಂತ್ಯಸಂಸ್ಕಾರ ಭಾನುವಾರ ಪಟ್ಟಣದ ರುದ್ರಭೂಮಿಯಲ್ಲಿ ನೆರವೇರಿತು. ಪೊಲೀಸ್‌ ಇಲಾಖೆ ಹಾಗೂ ತಾಲ್ಲೂಕು ನೌಕರರ ಸಂಘದ ವತಿಯಿಂದ ಸಂತಾಪ ಸೂಚಿಸಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು