ಶನಿವಾರ, ಡಿಸೆಂಬರ್ 14, 2019
24 °C

ಶಾಸಕ ತನ್ವೀರ್ ಸೇಠ್ ಮೇಲೆ ಹಲ್ಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಶಾಸಕ ತನ್ವೀರ್ ಸೇಠ್  ಅವರ ಮೇಲೆ ಭಾನುವಾರ ರಾತ್ರಿ ಯುವಕನೊಬ್ಬ ಕತ್ತಿಯಿಂದ ಕುತ್ತಿಗೆ ಭಾಗಕ್ಕೆ ಹಲ್ಲೆ ನಡೆಸಿದ್ದಾನೆ. ಗಾಯಗೊಂಡಿರುವ ತನ್ವೀರ್ ಸೇಠ್ ಅವರನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬನ್ನಿಮಂಟಪದ ಬಾಲಭವನದ ಆವರಣದಲ್ಲಿ ನಡೆಯುತ್ತಿದ್ದ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 11.30ರ ಸುಮಾರಿನಲ್ಲಿ ಘಟನೆ ನಡೆದಿದೆ ಎಂದು ಅವರ ಬೆಂಬಲಿಗರೊಬ್ಬರು ತಿಳಿಸಿದ್ದಾರೆ.

ಹಲ್ಲೆ ಮಾಡಿದ ವ್ಯಕ್ತಿ ಫರ್ಹಾನ್ ಪಾಷಾ (24) ಗೌಸಿಯಾನಗರದ ಕೆ.ಎಂ.ಪುರಂ ನಿವಾಸಿ ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ ಎಂದು ಉನ್ನತ ಮೂಲಗಳು ‘ಪ್ರಜಾವಾಣಿ’ಗೆ ಖಚಿತಪಡಿಸಿವೆ.

ಆರೋಪಿಯನ್ನು ಹಿಡಿದಿರುವ ಬೆಂಬಲಿಗರು ಎನ್.ಆರ್.ಠಾಣೆ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಕೊಲಂಬಿಯಾ ಏಷಿಯಾ ಆಸ್ಪತ್ರೆ ಮುಂದೆ ನೂರಾರು ಮಂದಿ

ಹಲ್ಲೆಗೊಳಗಾದ ಶಾಸಕ‌ ತನ್ವೀರ್ ಸೇಠ್ ಅವರನ್ನು ಕೊಲಂಬಿಯಾ ಏಷಿಯಾ ಅಸ್ಪತ್ರೆಗೆ ದಾಖಲಿಸುತ್ತಿದ್ದಂತೆ ಆಸ್ಪತ್ರೆ ಮುಂದೆ ನೂರಾರು ಮಂದಿ ಜನರು ಸೇರಿದ್ದಾರೆ. ಆಸ್ಪತ್ರೆ ಆವರಣದಲ್ಲಿ ಬಿಗಿ‌ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಆಸ್ಪತ್ರೆಯ ಪ್ರವೇಶಕ್ಕೆ ಅವಕಾಶ ನೀಡುತ್ತಿಲ್ಲ.

ಡಿಸಿಪಿ ಮುತ್ತುರಾಜ್ ನೇತೃತ್ವದಲ್ಲಿ ನೂರಕ್ಕೂ ಅಧಿಕ ಪೊಲೀಸರು ಭದ್ರತಾ ಕಾರ್ಯದಲ್ಲಿ ನಿರತರಾಗಿದ್ದಾರೆ.
ಎನ್.ಆರ್.ಮೊಹಲ್ಲಾ, ಮಂಡಿಮೊಹಲ್ಲಾ, ಲಷ್ಕರ್ ಮೊಹಲ್ಲಾ, ಉದಯಗಿರಿ ಸೇರಿದಂತೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು