ಬುಧವಾರ, ಫೆಬ್ರವರಿ 19, 2020
16 °C

ಹಲ್ಲೆಗೆ ಪ್ರೇರಣೆ ನೀಡಿದ ಆರೋಪಿಗಾಗಿ ಶೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಶಾಸಕ ತನ್ವೀರ್‌ಸೇಠ್‌ ಮೇಲೆ ನಡೆದ ಹಲ್ಲೆ ಪ್ರಕರಣ ಕುರಿತು ವಿಶೇಷ ತನಿಖಾ ತಂಡವು ಹಗಲಿರುಳೆನ್ನದೇ ತನಿಖೆ ನಡೆಸುತ್ತಿದೆ. ಇದರ ಹಿಂದಿರುವ ಸಂಘಟನೆಯ ಕುರಿತು ಸಾಕ್ಷ್ಯಗಳನ್ನು ಕಲೆ ಹಾಕುವಲ್ಲಿ ನಿರತವಾಗಿದೆ. ಜತೆಗೆ, ಹಲ್ಲೆ ನಡೆಸುವಂತೆ ಪ್ರೇರೇಪಿಸಿದ ಸಂಘಟನೆಯಲ್ಲಿನ ಪ್ರಮುಖ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.

ಕೆಲ ವರ್ಷಗಳ ಹಿಂದೆ ಕ್ಯಾತಮಾರನಹಳ್ಳಿಯಲ್ಲಿ ನಡೆದ ರಾಜು ಹತ್ಯೆಯ ಆರೋಪಿಗಳಲ್ಲಿ ಕೆಲವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗಿದೆ.

ಫರ್ಹಾನ್‌ಪಾಷಾ ಸಂಘಟನೆಯೊಂದು ನೇಮಕ ಮಾಡಿಕೊಂಡಿರುವ ಹೊಸ ತಲೆಮಾರಿನ ಯುವಕ. ಈತ ಈ ಹಿಂದೆ ಇಂತಹ ದುಷ್ಕೃತ್ಯಗಳಲ್ಲಿ ತೊಡಗಿರುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು