ಬುಧವಾರ, ಸೆಪ್ಟೆಂಬರ್ 18, 2019
21 °C
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ವಾಟಾಳ್ ನಾಗರಾಜ್ ವಿನೂತನ ಪ್ರತಿಭಟನೆ

ಎಸ್.ಎಲ್.ಭೈರಪ್ಪ ವಿರುದ್ಧ ಪ್ರಗತಿಪರರ ಆಕ್ರೋಶ

Published:
Updated:
Prajavani

ಮೈಸೂರು: ಸಾಹಿತಿ ಎಸ್.ಎಲ್.ಭೈರಪ್ಪ ವಿರುದ್ಧ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಬುಧವಾರ ಇಲ್ಲಿನ ಪುರಭವನದ ಆವರಣದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದರು.

ಭೈರಪ್ಪ ಅವರು ಸಂವಿಧಾನದ ಮತ್ತು ಮಹಿಳೆಯರ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಅವರು ಆರೋಪಿಸಿದರು.

ರಂಗಕರ್ಮಿ ಜನಾರ್ದನ್ ಮಾತನಾಡಿ, ‘ಭಾರತ ದೇಶ ಕಟ್ಟಲು ಅಡಿಪಾಯವಾಗಿರುವ ಸಂವಿಧಾನವನ್ನು ಬದಲಾವಣೆ ಮಾಡುವುದು ಮತ್ತು ವಿಮರ್ಶೆ ಮಾಡುವುದು ಸರಿಯಲ್ಲ. ಸಂವಿಧಾನದ ಅನ್ನ ತಿಂದು ಅದರ ವಿರುದ್ಧವೇ ಮಾತನಾಡುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದರು.

ಭೈರಪ್ಪ ಅವರು ಸಂವಿಧಾನದ ವಿರುದ್ಧ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ಒಂದು ವೇಳೆ ಮುಂದುವರಿಸಿದರೆ ಹಳ್ಳಿಹಳ್ಳಿಗಳಿಗೆ ಹೋಗಿ ಅವರ ವಿರುದ್ಧ ಪ್ರಚಾರ ಮಾಡುತ್ತೇವೆ. ಸದ್ಯ, ಹಿರಿಯರು ಎಂಬ ಕಾರಣಕ್ಕೆ ಕೆಲವರು ಅವರಿಗೆ ಗೌರವ ಕೊಡುತ್ತಾರೆ. ಇನ್ನು ಮುಂದೆ ಆ ಗೌರವವೂ ಇಲ್ಲವಾಗುತ್ತದೆ ಎಂದು ಅವರು ಎಚ್ಚರಿಸಿದರು.

ಚಿಂತಕ ಭಗವಾನ್, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ಸಂಚಾಲಕ ಚೋರನಹಳ್ಳಿ ಶಿವಣ್ಣ, ಮುಖಂಡರಾದ ಲಕ್ಷ್ಮೀ ನಾರಾಯಣ, ಪ್ರಸನ್ನ ಕುಮಾರ್, ಕೆ.ಆರ್.ಗೋಪಾಲಕೃಷ್ಣ, ಮುದ್ದುಕೃಷ್ಣ ಸೇರಿದಂತೆ ಹಲವರು ಭಾಗವಹಿಸಿದ್ದರು.

Post Comments (+)