ಶುಕ್ರವಾರ, ಅಕ್ಟೋಬರ್ 7, 2022
23 °C

‘ಶಿಕ್ಷಣ, ಉದ್ಯೋಗ ವಂಚಿತ ಬಲಿಜ ಸಮಾಜ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ‘ಬಲಿಜ ಸಮುದಾಯದ ಹೆಚ್ಚು ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಹಾಗೂ ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ’ ಎಂದು ಕಾಂಗ್ರೆಸ್ ಮುಖಂಡ ಎಚ್.ಎ.ವೆಂಕಟೇಶ್ ಹೇಳಿದರು‌.

ಮಾನಸ ಮಾನಸಗಂಗೋತ್ರಿಯ ಲಲಿತಕಲಾ ಕಾಲೇಜಿನ ಸಭಾಂಗಣದಲ್ಲಿ ಕೈವಾರ ಯೋಗಿ ನಾರೇಯಣ ಯತೀಂದ್ರರ ಬಲಿಜ(ಬಣಜಿಗ) ಸಂಘದಿಂದ ಭಾನುವಾರ ಆಯೋಜಿಸಿದ್ದ ಬೆಂಗಳೂರಿನ ನ್ಯೂ ಬಾಲ್ಡ್ ವಿನ್ ವಿದ್ಯಾಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಡಾ.ಟಿ.ವೇಣುಗೋಪಾಲ ಅವರಿಗೆ ಸನ್ಮಾನ, ಹಿರಿಯರಿಗೆ ಸತ್ಕಾರ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸಮಾಜದವರು ನಾಯಕತ್ವದ ಗುಣ ಬೆಳೆಸಿಕೊಳ್ಳಬೇಕು’ ಎಂದರು.

ಸನ್ಮಾನ ಸ್ವೀಕರಿಸಿದ ಡಾ.ಟಿ.ವೇಣುಗೋಪಾಲ್ ಮಾತನಾಡಿದರು.

ಮೈಸೂರು ವಿ.ವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಉದ್ಘಾಟಿಸಿದರು. ವೇಣುಗೋಪಾಲ್ ಪತ್ನಿ ಸೌಭಾಗ್ಯವತಿ, ಕುಲಸಚಿವ ಪ್ರೊ.ಶಿವಪ್ಪ, ಮುಖಂಡರಾದ ದಾಸರಿ ರಾಮು, ಕೃಷ್ಣ ಕಿಶೋರ್, ಸರಿಗಮ ವಿಜಿ, ರೇಣು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು