ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಫ್‍ಐ, ಎಸ್‍ಡಿಪಿಐ ನಿಷೇಧಿಸಲು ಬಿಜೆಪಿ ಆಗ್ರಹ

Last Updated 13 ಆಗಸ್ಟ್ 2020, 5:07 IST
ಅಕ್ಷರ ಗಾತ್ರ

ಮೈಸೂರು: ‘ಸಮಾಜದ ಶಾಂತಿ ಹದಗೆಡಿಸಲು, ಕೋಮು ಗಲಭೆ ಹುಟ್ಟು ಹಾಕುತ್ತಿರುವ ಪಿಎಫ್‌ಐ, ಎಸ್‍ಡಿಪಿಐ ಸಂಘಟನೆಗಳ ಕಾರ್ಯಕರ್ತರನ್ನು ಕೂಡಲೇ ಬಂಧಿಸಬೇಕು. ಜತೆಗೆ ಸಂಘಟನೆಯನ್ನು ನಿಷೇಧಿಸಬೇಕು’ ಎಂದು ಮೈಸೂರು ನಗರ ಬಿಜೆಪಿ ಅಧ್ಯಕ್ಷ ಟಿ.ಎಸ್‌.ಶ್ರೀವತ್ಸ ಒತ್ತಾಯಿಸಿದ್ದಾರೆ.

‘ಬೆಂಗಳೂರಿನಲ್ಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಯ ಮೇಲೆ ದಾಳಿ ಮಾಡಿದ್ದಲ್ಲದೆ; ಸಾರ್ವಜನಿಕರ ಆಸ್ತಿ ನಷ್ಟವನ್ನುಂಟು ಮಾಡಿರುವ ಕೃತ್ಯ ಖಂಡನಾರ್ಹ. ಪೊಲೀಸರು, ಮಾಧ್ಯಮದವರ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಲಾಗುವುದು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಗಲಭೆಕೋರರಿಂದ ಕಿಟಕಿ ಗಾಜುಗಳು, ವಾಹನಗಳು ಹಾನಿಗೀಡಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಪರಿಹಾರ ಕಲ್ಪಿಸಬೇಕು. ಗಲಭೆಕೋರರಿಂದಲೇ ನಷ್ಟ ಭರಿಸುವಂತಹ ಕ್ರಮಕ್ಕೆ ಮುಂದಾಗಬೇಕು’ ಎಂದು ಆಗ್ರಹಿಸಿದ್ದಾರೆ.

‘ಕೋವಿಡ್‌ ಸಮಸ್ಯೆ ನಡುವೆ ಕೆಲಸ ಮಾಡುತ್ತಿರುವ ಮಾಧ್ಯಮದವರು, ಪೊಲೀಸರ ಮೇಲೆ ಹಲ್ಲೆ ನಡೆಸಿದ ಕೃತ್ಯವನ್ನು ಸಹಿಸಲಾಗದು. ಈ ವಿಚಾರದಲ್ಲಿ ಯಾರೇ ತಪ್ಪು ಎಸಗಿದ್ದರೂ ಅಂತಹವರನ್ನು ಬಂಧಿಸಿ ಮೊಕದ್ದಮೆ ಹೂಡಿ ಜೈಲಿಗಟ್ಟಬೇಕು’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT