ಬುಧವಾರ, ಡಿಸೆಂಬರ್ 2, 2020
16 °C

ಬೇಲೂರು ತಾ.ಪಂ: ಸುಮಾ ಅಧ್ಯಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೇಲೂರು: ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾಗಿ ಜೆಡಿಎಸ್‌ ಸದಸ್ಯೆ ಸುಮಾ ಪರಮೇಶ್ ಅವಿರೋಧವಾಗಿ ಆಯ್ಕೆಯಾದರು.

ಹಿಂದಿನ ಅಧ್ಯಕ್ಷೆ ಇಂದಿರಾ ರವಿಕುಮಾರ್ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಸುಮಾ ಪರಮೇಶ್ ಒಬ್ಬರೆ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾ ಅಧಿಕಾರಿಯಾಗಿದ್ದ ಸಕಲೇಶಪುರ ಉಪ ವಿಭಾಗಾಧಿಕಾರಿ ಗಿರೀಶ್ ನಂದನ್, ಅವಿರೋಧ ಆಯ್ಕೆಯನ್ನು ಘೋಷಿಸಿದರು.

ತಾಲ್ಲೂಕು ಪಂಚಾಯಿತಿಯಲ್ಲಿ ಒಟ್ಟು 17 ಸದಸ್ಯ ಬಲವಿದ್ದು, ಜೆಡಿಎಸ್ 12, ಕಾಂಗ್ರೆಸ್ 4 ಹಾಗೂ ಬಿಜೆಪಿಯ ಒಬ್ಬರು ಸದಸ್ಯರಿದ್ದಾರೆ.

ಜೆಡಿಎಸ್‌ ಸದಸ್ಯರಾದ ಅಶ್ವತ್, ಹರೀಶ್, ರಂಗೇಗೌಡ ಹಾಗೂ ಇಂದಿರಾ ರವಿಕುಮಾರ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದು, ಪಕ್ಷದ ಒಳ ಒಪ್ಪಂದದಂತೆ ಸುಮಾ ಪರಮೇಶ್‌ ಅವರಿಗೆ ಅಧ್ಯಕ್ಷರಾಗಲು ಅವಕಾಶ ಮಾಡಿಕೊಡಲಾಗಿದೆ.

ಸುಮಾ ಪರಮೇಶ್ ಮಾತನಾಡಿ, ‘ಪಕ್ಷದ ವರಿಷ್ಠರು ಹಾಗೂ ಸದಸ್ಯರ ಸಹಕಾರದಿಂದ ಅಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದೇನೆ. ಎಲ್ಲ ಸದಸ್ಯರು, ಮುಖಂಡರ ಸಹಕಾರದೊಂದಿಗೆ ಅಭಿವೃದ್ಧಿ ಕೆಲಸ ಮಾಡಲಾಗುವುದು’ ಎಂದರು.

ಈ ಸಂದರ್ಭ ತಾಲ್ಲೂಕು ಪಂಚಾಯಿತಿ ಇಒ ರವಿಕುಮಾರ್, ಉಪಾಧ್ಯಕ್ಷೆ ಜಮುನಾ ಅಣ್ಣಪ್ಪ ಮತ್ತು ತಾ.ಪಂ ಸದಸ್ಯರು, ಜೆಡಿಎಸ್ ಮುಖಂಡರು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.