ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಟ್ಟದಪುರ; ಪೊಲೀಸರ ಅಮಾನತಿಗೆ ಒತ್ತಾಯ

3ನೇ ದಿನವೂ ಪೊಲೀಸ್ ಠಾಣೆ ಮುಂಭಾಗ‌ ರೈತರ ಪ್ರತಿಭಟನೆ
Last Updated 19 ಮೇ 2019, 10:33 IST
ಅಕ್ಷರ ಗಾತ್ರ

ಬೆಟ್ಟದಪುರ: ರೈತರ ಮೇಲೆ ದೌರ್ಜನ್ಯ ಎಸಗಿದ ಪೊಲೀಸರನ್ನು ತಕ್ಷಣ ಅಮಾನತುಪಡಿಸಬೇಕು ಎಂದು ಆಗ್ರಹಿಸಿ ರೈತರು ಮತ್ತು ಪ್ರಗತಿಪರ ಮುಖಂಡರು ಶುಕ್ರವಾರ ಇಲ್ಲಿನ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು.

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಸೇರಿದ ಮುಖಂಡರು ಪೊಲೀಸರ ವಿರುದ್ಧ ಘೋಷಣೆ ಕೂಗಿದರು.

ಬೆಟ್ಟದಪುರದ ಮುಖ್ಯ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಅಕ್ರೋಶ ವ್ಯಕ್ತಪಡಿಸಿದರು. ಇದರಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ರೈತ ಸಂಘದ ರಾಜ್ಯಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ‘ಸಂಘಟನೆಯ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಲೋಕೇಶ್‌ ಅವರ ಮೇಲೆ ಸುಳ್ಳು ಆರೋಪ ಮಾಡಿ ಬಂಧಿಸಲಾಗಿದೆ. ಇದಕ್ಕೆ ಕಾರಣವಾದ ಬೆಟ್ಟದಪುರ ಪೊಲೀಸ್ ಠಾಣೆಯ ಪಿಎಸ್ಐ ಹಾಗೂ ಮಹಿಳಾ ಕಾನ್‌ಸ್ಟೆಬಲ್‌ ಅವರನ್ನು ಕೂಡಲೇ ಅಮಾನತು ಮಾಡಬೇಕು’ ಎಂದು ಒತ್ತಾಯಿಸಿದರು.

ಅವರ ವಿರುದ್ಧ ಕ್ರಮ ಕೈಗೊಳ್ಳದೇ ಇದ್ದರೆ ಹೋರಾಟವನ್ನು ರಾಜ್ಯದಾದ್ಯಂತ ವಿಸ್ತರಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಹೋರಾಟಗಾರ ಪ.ಮಲ್ಲೇಶ್ ಮಾತನಾಡಿ, ರಾಜ್ಯದಲ್ಲಿ ಹದಗೆಟ್ಟಿರುವುರುವ ವ್ಯವಸ್ಥೆಯ ವಿರುದ್ಧ ರೈತರು ಒಗ್ಗಟ್ಟಿನಿಂದ ಹೋರಾಡಲು ಮುಂದಾಗಿದ್ದು, ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು.

ಶಾಸಕ ಕೆ.ಮಹದೇವ್ ಮಾತನಾಡಿ, ಬಂಧಿಸಲಾಗಿದ್ದ ಲೋಕೇಶ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಪ್ರಕರಣದ ತನಿಖೆ ನಡೆದಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಪಿ.ವಿ.ಸ್ನೇಹಾ, ‘ಸಬ್‌ಇನ್‌ಸ್ಪೆಕ್ಟರ್ ಮತ್ತು ಮಹಿಳಾ ಕಾನ್‌ಸ್ಟೆಬಲ್ ರಜೆಯಲ್ಲಿರುವುದರಿಂದ ನಂತರ ವಿಚಾರಣೆ ನಡೆಸಲಾಗುವುದು’ ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ವಾಪಸ್ ಪಡೆಯಲಾಯಿತು.

ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ರಾಮಕೃಷ್ಣಯ್ಯ, ಹೊಸೂರು ಕುಮಾರ್, ಹೊಸಕೋಟೆ ಬಸವರಾಜು, ಮಂಗಳೂರು ರವಿ ಕಿರಣ ಪೂಣಚ್ಚ, ಸರಗೂರು ನಟರಾಜು, ತಾಲ್ಲೂಕು ಘಟಕದ ಅಧ್ಯಕ್ಷ ಶಿವಣ್ಣಶೆಟ್ಟರು, ನಂಜುಂಡಸ್ವಾಮಿ, ಬೋರಲಿಂಗೇಗೌಡ, ಶಾಂತಮಲ್ಲಪ್ಪ, ಶ್ರೀನಿವಾಸ, ನೇತ್ರಾವತಿ, ಸುನೀತಾ ಪುಟ್ಟಣ್ಣಯ್ಯ, ದೇವರಾಜು, ಕೆಂಪೇಗೌಡ, ರಘು, ರವಿ, ರಾಮು, ಚಾಮರಾಜನಗರ, ಹಾಸನ, ಮೈಸೂರು, ಮಂಡ್ಯ ಎಲ್ಲಾ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT