ಮೈಸೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ವತಿಯಿಂದ ಸಿದ್ದರಾಮಯ್ಯ ಅವರ ಹುಟ್ಟುಹಬ್ಬದ ಅಂಗವಾಗಿ ಗುರುವಾರ 'ಭಾಗ್ಯವಿಧಾತ ಸಿದ್ದರಾಮಯ್ಯ' ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಯಿತು.

ಅಂತರರಾಷ್ಟ್ರೀಯ ಕಲಾವಿದ ಬಾಬುರಾವ್ ನಡೋನಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಿವೃತ್ತ ಹೆಚ್ಚುವರಿ ನಿರ್ದೇಶಕ ಎಂ.ರಾಮಯ್ಯ, ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ರಾಜ್ಯಾಧ್ಯಕ್ಷ ಸಿ.ವೆಂಕಟೇಶ್, ಅಖಿಲ ಭಾರತ ಕ್ರೈಸ್ತ ಮಹಾಸಭಾ ರಾಜ್ಯ ಮಹಿಳಾ ಉಪಾಧ್ಯಕ್ಷೆ ರೀನಾ ಪ್ಯಾಟ್ರಿಕ್, ಸುಜೀವ್ ಸಂಸ್ಥೆ ಮುಖ್ಯಸ್ಥ ಎಸ್.ರಾಜಾರಾಂ, ಬುಡಕಟ್ಟು ಮಹಿಳಾ ಹೋರಾಟಗಾರ್ತಿ ವೀಣಾ ಪ್ರಭು ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಸಾಹಿತಿಗಳಾದ ಬಂಜಗೆರೆ ಜಯಪ್ರಕಾಶ್, ಪ್ರೊ.ಕೆ.ಎಸ್.ಭಗವಾನ್, ಪ್ರೊ. ಹಿ.ಸಿ.ರಾಮಚಂದ್ರೇಗೌಡ, ಮೈಸೂರು ವಿ.ವಿ ಕುಲಪತಿ ಪ್ರೊ.ಜಿ.ಹೇಮಂತಕುಮಾರ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.