ಬೃಹತ್‌ ಪರದೆಯಲ್ಲಿ ವೀಕ್ಷಣೆಗೆ ಅವಕಾಶ

ಶುಕ್ರವಾರ, ಮೇ 24, 2019
29 °C
ಐಪಿಎಲ್‌ ಟ್ವೆಂಟಿ–20 ಕ್ರಿಕೆಟ್‌ ಟೂರ್ನಿ ಫೈನಲ್‌ ಇಂದು

ಬೃಹತ್‌ ಪರದೆಯಲ್ಲಿ ವೀಕ್ಷಣೆಗೆ ಅವಕಾಶ

Published:
Updated:

ಮೈಸೂರು: ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟ್ವೆಂಟಿ–20 ಕ್ರಿಕೆಟ್‌ ಟೂರ್ನಿಯ ಫೈನಲ್‌ ಪಂದ್ಯದ ನೇರ ಪ್ರಸಾರವನ್ನು ಬೃಹತ್ ಪರದೆಯಲ್ಲಿ ವೀಕ್ಷಿಸುವ ಅವಕಾಶ ಮೈಸೂರಿನ ಕ್ರಿಕೆಟ್‌ ಪ್ರೇಮಿಗಳಿಗೆ ಲಭಿಸಿದೆ.

ನಗರದ ಜೆಎಸ್‌ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ (ಎಸ್‌ಜೆಸಿಇ) ಮೈದಾನದಲ್ಲಿ ಭಾನುವಾರ ಎಲ್‌ಇಡಿ ಪರದೆಯಲ್ಲಿ ಫೈನಲ್‌ ಪಂದ್ಯದ ನೇರ ಪ್ರಸಾರ ಮಾಡುವ ಮೂಲಕ ಸ್ಟೇಡಿಯಂ ಮಾದರಿಯ ವಾತಾವರಣ ನಿರ್ಮಿಸಲಾಗುವುದು ಎಂದು ಬಿಸಿಸಿಐ ಪ್ರತಿನಿಧಿ ಇಮ್ರಾನ್‌ ದತರ್‌ ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಚೆನ್ನೈ ಸೂಪರ್‌ ಕಿಂಗ್ಸ್‌ ಮತ್ತು ಮುಂಬೈ ಇಂಡಿಯನ್ಸ್‌ ತಂಡಗಳ ನಡುವಿನ ಫೈನಲ್‌ ಪಂದ್ಯ ಹೈದರಾಬಾದ್‌ನಲ್ಲಿ ಭಾನುವಾರ ಸಂಜೆ 7.30ಕ್ಕೆ ಆರಂಭವಾಗಲಿದೆ.

ಬಿಸಿಸಿಐ ಕಳೆದ ನಾಲ್ಕು ವರ್ಷಗಳಿಂದ ‘ಐಪಿಎಲ್‌ ಫ್ಯಾನ್‌ ಪಾರ್ಕ್‌’ ಹೆಸರಿನಲ್ಲಿ ವಿವಿಧ ನಗರಗಳಲ್ಲಿ ಐಪಿಎಲ್‌ ಟೂರ್ನಿಯ ಫೈನಲ್‌ ಪಂದ್ಯದ ನೇರಪ್ರಸಾರ ಮಾಡುತ್ತಾ ಬಂದಿದೆ. ‘ಫ್ಯಾನ್‌ಪಾರ್ಕ್‌’ ಒಟ್ಟು 65 ನಗರಗಳನ್ನು ತಲುಪಿದೆ ಎಂದು ಇಮ್ರಾನ್ ಹೇಳಿದರು.

ಎಸ್‌ಜೆಸಿಇ ಮೈದಾನದಲ್ಲಿ ಸುಮಾರು 7 ರಿಂದ 8 ಸಾವಿರ ಮಂದಿ ಸೇರುವ ನಿರೀಕ್ಷೆಯಿದೆ. ಅಭಿಮಾನಿಗಳಿಗೆ ಸಂಜೆ 6 ರಿಂದ ಮೈದಾನ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಎಲ್ಲ ರೀತಿಯ ಮೂಲ ಸೌಲಭ್ಯ ಕಲ್ಪಿಸಲಾಗಿದ್ದು, ವೈದ್ಯಕೀಯ ಸೌಲಭ್ಯ, ಅಗ್ನಿಶಾಮಕ ವ್ಯವಸ್ಥೆ, ಪೊಲೀಸ್ ಬಂದೋಬಸ್ತ್ ಸೇರಿದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

ಕೆಎಸ್‌ಸಿಎ ಮೈಸೂರು ವಲಯ ನಿಮಂತ್ರಕ ಎಸ್.ಬಾಲಚಂದರ್ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !