ಬುಧವಾರ, ಸೆಪ್ಟೆಂಬರ್ 22, 2021
23 °C

ಬಿಳಿಕೆರೆ: ವಿದ್ಯುತ್‌ ‍ಪ್ರವಹಿಸಿ ಲೈನ್‌ಮನ್‌ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಿಳಿಕೆರೆ: ಹೋಬಳಿಯ ಬೆಂಕಿಪುರ ಗ್ರಾಮದಲ್ಲಿ ಸೋಮವಾರ ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶಿಸಿ ಲೈನ್‌ಮನ್‌ ಮೃತಪಟ್ಟಿದ್ದು, ಮತ್ತೊಬ್ಬರಿಗೆ ಗಂಭೀರ ಗಾಯವಾಗಿದೆ.

ಸೆಸ್ಕ್‌ನ ಬಿಳಿಕೆರೆ ಉಪವಿಭಾಗದ ಲೈನ್‌ಮನ್‌ ಕರಿನಾಯಕ (54) ಮೃತಪಟ್ಟಿದ್ದಾರೆ. ಪ್ರಶಾಂತ್ (25) ಗಂಭೀರ ಗಾಯಗೊಂಡಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ.

ಲೈನ್‌ಮನ್‌ ಕರಿನಾಯಕ ಅವರು ವಿದ್ಯುತ್ ಪರಿವರ್ತಕ ದುರಸ್ತಿಪಡಿಸುವ ವೇಳೆ ವಿದ್ಯುತ್‌ ಪ್ರಸರಣವನ್ನು ಸ್ಥಗಿತಗೊಳಿಸಲಾಗಿತ್ತು. ಕಂಬದ ಮೇಲೇರಿ ಪರಿಶೀಲಿಸುವ ವೇಳೆ ತಂತಿಯಲ್ಲಿ ವಿದ್ಯುತ್‌ ಪ‍್ರವಹಿಸಿ ನೇತು ಹಾಕಿದ ಸ್ಥಿತಿಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

‘ಅಧಿಕಾರಿಗಳ ಬೇಜವಾಬ್ದಾರಿ ಯಿಂದ ಘಟನೆ ಸಂಭವಿಸಿದ್ದು, ವಿದ್ಯುತ್ ಲೈನ್ ದುರಸ್ತಿಗಾಗಿ ತೆರಳುವುದಾಗಿ ಕಚೇರಿ ಅಧಿಕಾರಿಗಳಿಗೆ ತಿಳಿಸಿದ್ದರು. ಆದರೂ ಲೈನ್‌ನಲ್ಲಿ ವಿದ್ಯುತ್ ಪ್ರವಹಿಸಿದೆ. ಇದಕ್ಕೆ ಸೆಸ್ಕ್ ಅಧಿಕಾರಿಗಳೇ ಹೊಣೆ’ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.