ಮುಗಿಲು ಮುಟ್ಟಿದ ಸಂಭ್ರಮ

ಗುರುವಾರ , ಜೂನ್ 27, 2019
29 °C
ಮುಗಿಬಿದ್ದ ಬಿಜೆಪಿ ಕಾರ್ಯಕರ್ತರು, ವಿಜಯೋತ್ಸವ ಆಚರಣೆ

ಮುಗಿಲು ಮುಟ್ಟಿದ ಸಂಭ್ರಮ

Published:
Updated:
Prajavani

ಮೈಸೂರು: ಬಿಗಿ ಭದ್ರತೆ ಏರ್ಪಡಿಸಿದ್ದ ಲೋಕಸಭಾ ಚುನಾವಣೆಯ ಎಣಿಕೆ ಕೇಂದ್ರದ ಸಮೀಪ ಬಿಜೆಪಿ ಕಾರ್ಯಕರ್ತರು ಕುಣಿದು ಕುಪ್ಪಳಿಸಿದರು. ‘ಭಾರತ್‌ ಮಾತಾ ಕೀ ಜೈ’ ಎಂಬ ಜಯಘೋಷಗಳನ್ನು ಕೂಗುವ ಮೂಲಕ ಸಂಭ್ರಮಿಸಿದರು.

ಆರಂಭದಲ್ಲಿ ಯಾವೊಂದು ಪಕ್ಷದ ಕಾರ್ಯಕರ್ತರೂ ಎಣಿಕೆ ಕೇಂದ್ರದತ್ತ ಸುಳಿದಿರಲಿಲ್ಲ. ಯಾವಾಗ ಬಿಜೆಪಿ ಹೆಚ್ಚಿನ ಮತಗಳಿಂದ ಮುನ್ನಡೆ ಕಾಯ್ದುಕೊಂಡಿತೋ ಆಗ ಕಾರ್ಯಕರ್ತರು ಬರತೊಡಗಿದರು.

ಬಿಜೆಪಿ ಅಭ್ಯರ್ಥಿ ಪ್ರತಾಪಸಿಂಹ ಅವರನ್ನು ಹೆಗಲ ಮೇಲೆ ಎತ್ತಿಕೊಂಡು ಘೋಷಣೆಗಳನ್ನು ಕೂಗಿದರು. ಪ್ರತಾಪಸಿಂಹ ಅವರ ತಾಯಿ, ಪತ್ನಿ, ಪುತ್ರಿ ಈ ಸಂಭ್ರಮದಲ್ಲಿ ಭಾಗಿಯಾದರು.

ಕೆಲವು ಕಾರ್ಯಕರ್ತರು ಸಿಹಿ ವಿತರಿಸಿದರೆ, ಮತ್ತೆ ಕೆಲವು ಕಾರ್ಯಕರ್ತರು ಬ್ಯಾಂಡ್‌ನ್ನು ಬಾರಿಸಿ ಸಂಭ್ರಮಿಸಿದರು. ಮತ್ತೆ ಹಲವರು ನರ್ತಿಸುವ ಮೂಲಕ ವಿಜಯೋತ್ಸವ ಆಚರಿಸಿದರು.

ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಶಾಸಕ ಎಲ್.ನಾಗೇಂದ್ರ, ‘ವಿದೇಶಗಳು ಈ ಚುನಾವಣೆಯ ಫಲಿತಾಂಶವನ್ನು ತುದಿಗಾಲಲ್ಲಿ ನಿಂತು ನೋಡುತ್ತಿದ್ದವು. ಈಗ ಉತ್ತರ ಸಿಕ್ಕಿದೆ. ನರೇಂದ್ರ ಮೋದಿ ಅವರ ಯೋಜನೆಗಳಿಗೆ ಅದ್ಭುತ ಜಯ ಸಿಕ್ಕಿದೆ’ ಎಂದು ಹೇಳಿದರು.

ಈ ವೇಳೆ ಪ್ರತಿಕ್ರಿಯಿಸಿದ, ಪ್ರತಾಪಸಿಂಹ ಅವರ ಪತ್ನಿ ಅರ್ಪಿತಾ, ‘ಗೆಲುವಿನ ನಿರೀಕ್ಷೆಯಲ್ಲಿದ್ದೆ. ಆದರೆ, ಇಂತಹ ದೊಡ್ಡ ಗೆಲುವನ್ನು ನಿರೀಕ್ಷಿಸಿರಲಿಲ್ಲ. ಇದಕ್ಕೆಲ್ಲ ಕಾರ್ಯಕರ್ತರು, ಮತದಾರರು ಕಾರಣ’ ಎಂದು ಹೇಳಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !