ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಶ್ವರಪ್ಪ ರಾಜೀನಾಮೆ ಪಡೆಯುವ ಪ್ರಸಂಗ ಇಲ್ಲ: ಕಟೀಲ್

Last Updated 13 ಏಪ್ರಿಲ್ 2022, 5:53 IST
ಅಕ್ಷರ ಗಾತ್ರ

ಮೈಸೂರು: ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ಪಡೆಯುವ ಸ್ಥಿತಿ ಈಗ ನಿರ್ಮಾಣವಾಗಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದರು.

ತನಿಖೆ ನಡೆಯಲಿ, ಯಾರೇ ತಪ್ಪಿತಸ್ಥರು ಇದ್ದರು ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಇಲ್ಲಿ ಬುಧವಾರ ಸುದ್ದಿಗಾರರಿಗೆ ತಿಳಿಸಿದರು.

ಸಿ.ಎಂ ರಾಜೀನಾಮೆ ಕೇಳಿದರೆ ಕೊಡುತ್ತೇನೆ ಎಂಬ ಈಶ್ವರಪ್ಪ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು ಅದು ಸಿ.ಎಂಗೆ ಹಾಗೂ ಈಶ್ವರಪ್ಪ ಅವರಿಗೆ ಬಿಟ್ಟ ವಿಚಾರ. ರಾಜ್ಯಾಧ್ಯಕ್ಷನಾಗಿ ನಾನು ನನ್ನ ಅಭಿಪ್ರಾಯ ತಿಳಿಸಿದ್ದೇನೆ. ಎಂದರು.

ಮುಖ್ಯಮಂತ್ರಿಗೆ ಈ ಬಗ್ಗೆ ನಾನು ಏನಾದರೂ ಹೇಳುವುದಿದ್ದರೆ ಅವರನ್ನೇ ಭೇಟಿ ಮಾಡಿ ಹೇಳುತ್ತೇನೆ ಎಂದು ತಿಳಿಸಿದರು.

ವಿರೋಧ ಪಕ್ಷಗಳು ರಾಜ್ಯಪಾಲರನ್ನೇಕೆ ಸಮಯ ಸಿಕ್ಕರೆ ರಾಷ್ಟ್ರಪತಿಗಳನ್ನೇ ಭೇಟಿ ಮಾಡಲಿ. ವಿರೋಧ ಪಕ್ಷಗಳು ಮೊದಲಿಂದಲೂ ಚಿಕ್ಕ ಚಿಕ್ಕ ವಿಚಾರಕ್ಕೆ ರಾಜೀನಾಮೆ ಕೇಳುತ್ತಲೆ ಇದ್ದಾರೆ. ಅವರು ಕೇಳಿದ್ದಕ್ಕೆಲ್ಲ ರಾಜೀನಾಮೆ ಕೊಡಲು ಆಗಲ್ಲ ಎಂದು ಹೇಳಿದರು.

ಗಣಪತಿ ಪ್ರಕರಣ ಬೇರೆ. ಆ ಕುರಿತು ದಾಖಲಾದ ಹಲವು ದಿನಗಳ ನಂತರ ಜಾರ್ಜ್ ರಾಜೀನಾಮೆ ಕೊಟ್ಟಿದ್ದರು. ಆದರೆ ನಾವು ಈ ಪ್ರಕರಣದಲ್ಲಿ ಘಟನೆ ನಡೆದ ತಕ್ಷಣ ತನಿಖೆಗೆ ಆದೇಶಿಸಿದ್ದೇವೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT