ಬುಧವಾರ, ಡಿಸೆಂಬರ್ 2, 2020
24 °C
₹ 31.30 ಲಕ್ಷ ಸುಲಿಗೆ ಮಾಡಿದ್ದ ಐವರ ಬಂಧನ

ಹನಿಟ್ರ್ಯಾಪ್‌ನಲ್ಲಿ ಬಿಜೆಪಿ ಮುಖಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಹನಿಟ್ರ್ಯಾಪ್‌ ನಡೆಸಿ, ವೈದ್ಯನಿಂದ ಹಣ ಸುಲಿಗೆ ಮಾಡುತ್ತಿದ್ದ ಐವರನ್ನು ಬಂಧಿಸಿದ ಇಲ್ಲಿನ ಕುವೆಂಪು ನಗರದ ಪೊಲೀಸರು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ನವೀನ್‌ ನೇರಳೆಕುಪ್ಪೆ, ಶಿವರಾಜು, ಹರೀಶ್‌, ಅನಿತಾ, ವಿಜಿ ಬಂಧಿತ ಆರೋಪಿಗಳು.

ನವೀನ್‌ ನೇರಳೆಕುಪ್ಪೆ ಈ ಪ್ರಕರಣದ ಸೂತ್ರಧಾರ ಎಂಬುದು ತಿಳಿದು ಬಂದಿದೆ.

ಈತ ಪಿರಿಯಾಪಟ್ಟಣ ತಾಲ್ಲೂಕು ಬಿಜೆಪಿ ಘಟಕದ ಯುವ ಮೋರ್ಚಾ ಪದಾಧಿಕಾರಿಯಾಗಿದ್ದ. ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಸೇರಿದಂತೆ ಹಲವು ಬಿಜೆಪಿ ಮುಖಂಡರ ಆಪ್ತನಾಗಿಯೂ ಗುರುತಿಸಿಕೊಂಡಿದ್ದ. ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷನಾಗಿಯೂ ಕಾರ್ಯ ನಿರ್ವಹಿಸುತ್ತಿದ್ದ ಎನ್ನಲಾಗಿದೆ. ಮತ್ತೊಬ್ಬ ಆರೋಪಿ ಹರೀಶ್‌ ಈ ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷ ಎಂಬುದು ಗೊತ್ತಾಗಿದೆ.

ಆರೋಪಿಗಳು ಪಿರಿಯಾಪಟ್ಟಣ ಬಿಜೆಪಿ ಮಂಡಲದ ಅಧ್ಯಕ್ಷ ಡಾ.ಕೆ.ಪ್ರಕಾಶ್‌ ಬಾಬುರಾವ್‌ನನ್ನು ಹನಿಟ್ರ್ಯಾಪ್‌ಗೆ ಬೀಳಿಸಿಕೊಂಡು, ₹ 31.30 ಲಕ್ಷ ಸುಲಿಗೆ ಮಾಡಿದ್ದಾರೆ. ಇನ್ನೂ ಹೆಚ್ಚಿನ ಮೊತ್ತಕ್ಕೆ ಬೇಡಿಕೆಯಿಟ್ಟಾಗ ಪ್ರಕಾಶ್‌ಬಾಬು ಮೈಸೂರಿನ ಕುವೆಂಪುನಗರ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಕಾಶ್‌ಬಾಬು ಮಹಿಳೆಯೊಬ್ಬರೊಂದಿಗೆ ಬೆಡ್‌ರೂಂನಲ್ಲಿರುವ ದೃಶ್ಯಾವಳಿಯ ವಿಡಿಯೊ ಕ್ಲಿಪ್ಪಿಂಗ್‌ ಇಟ್ಟುಕೊಂಡು ಆರೋಪಿಗಳು ಪದೇ ಪದೇ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದರು. ವೈದ್ಯರು ನೀಡಿದ ದೂರಿನನ್ವಯ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ ಎಂದು ಕುವೆಂಪುನಗರ ಪೊಲೀಸರು ತಿಳಿಸಿದರು.

ಈ ಆರೋಪಿಗಳ ತಂಡ ಹನಿಟ್ರ್ಯಾಪ್‌ ಜಾಲವನ್ನು ಹೊರ ಜಿಲ್ಲೆಗಳಲ್ಲೂ ನಡೆಸುತ್ತಿದೆ ಎಂಬುದು ಪೊಲೀಸರ ವಿಚಾರಣೆ ವೇಳೆ ಗೊತ್ತಾಗಿದೆ. ಈ ಜಾಲದಲ್ಲಿರುವ ಹಲವರ ಬಂಧನಕ್ಕೆ ಶೋಧ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು