ಮಂಗಳವಾರ, ಮೇ 24, 2022
30 °C

ವಿಧಾನಸಭೆ ಚುನಾವಣೆ: ಮೈಸೂರು ಜಿಲ್ಲಾವಾರು ಕೋರ್‌ ಸಮಿತಿ ಸಭೆ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯ ಮೈಸೂರು ವಿಭಾಗಮಟ್ಟದ ಜಿಲ್ಲಾವಾರು ಕೋರ್‌ ಸಮಿತಿ ಸಭೆ ಮಂಗಳವಾರ ಇಲ್ಲಿನ ಲಲಿತಮಹಲ್‌ ಅರಮನೆಯಲ್ಲಿ ಆರಂಭವಾಯಿತು.

ಸಚಿವರಾದ ಕೆ.ಎಸ್.ಈಶ್ವರಪ್ಪ, ವಿ.ಸೋಮಣ್ಣ, ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪಸಿಂಹ, ಜಗದೀಶ್‌ಶೆಟ್ಟರ್ ಸಭೆಯಲ್ಲಿ ಭಾಗಿಯಾಗಿದ್ದಾರೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಅವರು ಮಧ್ಯಾಹ್ನದ ನಂತರ ಸಭೆಗೆ ಹಾಜರಾಗಲಿದ್ದಾರೆ.

ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಜಿಲ್ಲೆಗಳ ಬಿಜೆಪಿ ಜನಪ್ರತಿನಿಧಿಗಳು, ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರೊಂದಿಗೆ ಮುಖಂಡರು ಪ್ರತ್ಯೇಕವಾಗಿ ಸಭೆ ನಡೆಸುತ್ತಿದ್ದಾರೆ.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷೆ ಮಂಗಳಾ ಸೋಮಶೇಖರ್, ಶಾಸಕರಾದ ಹರ್ಷವರ್ಧನ್, ಎಲ್.ನಾಗೇಂದ್ರ, ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು ಭಾಗಿಯಾಗಿದ್ದಾರೆ.

ಏಪ್ರಿಲ್ 13ರಂದು ಮಧ್ಯಾಹ್ನ 3 ಗಂಟೆಗೆ ವಸ್ತುಪ್ರದರ್ಶನ ಆವರಣದಲ್ಲಿ ವಿಭಾಗದ ಮಟ್ಟದ ಕಾರ್ಯಕರ್ತರ ಸಮಾವೇಶ ಜರುಗಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು