ಶನಿವಾರ, ಅಕ್ಟೋಬರ್ 24, 2020
26 °C
ಶಿರಾ, ಆರ್‌.ಆರ್‌.ನಗರ ಉಪ ಚುನಾವಣೆ ಚರ್ಚೆ

ಬಿಜೆಪಿ ರಾಜ್ಯ ಕಾರ್ಯಕಾರಿಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಅ.15ರ ಗುರುವಾರ ನಗರದ ಪ್ರೆಸಿಡೆಂಟ್‌ ಹೋಟೆಲ್‌ನಲ್ಲಿ ನಡೆಯಲಿದೆ.

ಈ ಕಾರ್ಯಕಾರಿಣಿಯಲ್ಲಿ ಶಿರಾ, ಆರ್.ಆರ್.ನಗರ ಉಪ ಚುನಾವಣೆ ಕುರಿತು ಪ್ರಮುಖವಾಗಿ ಚರ್ಚೆ ನಡೆಸಿ, ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕಾರ್ಯತಂತ್ರ ರೂಪಿಸಲಾಗುವುದು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ ಬುಧವಾರ ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಗ್ರಾಮ ಪಂಚಾಯಿತಿ ಚುನಾವಣೆಗೆ ಪಕ್ಷದ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಕುರಿತಂತೆಯೂ ಚರ್ಚಿಸಲಾಗುವುದು ಎಂದು ಅವರು ಹೇಳಿದರು.

ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಉಪಾಧ್ಯಕ್ಷರಾದ ಅರವಿಂದ ಲಿಂಬಾವಳಿ, ನಿರ್ಮಲ್ ಕುಮಾರ್ ಸುರಾನ, ಶೋಭಾ ಕರಂದ್ಲಾಜೆ, ಬಿ.ವೈ.ವಿಜಯೇಂದ್ರ, ಪ್ರಧಾನ ಕಾರ್ಯದರ್ಶಿಗಳಾದ ಎನ್.ರವಿಕುಮಾರ್, ಸಿದ್ದರಾಜು, ಅಶ್ವಥ್ ನಾರಾಯಣ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಘಟಕದ ಗ್ರಾಮಾಂತರ ಅಧ್ಯಕ್ಷೆ ಮಂಗಳಾ ಸೋಮಶೇಖರ್ ಮಾತನಾಡಿ, ನಗರದ ರಾಜೇಂದ್ರ ಕಲಾಮಂದಿರದಲ್ಲಿ ಮಧ್ಯಾಹ್ನ 2.30ಕ್ಕೆ ಜಿಲ್ಲಾ ಕಾರ್ಯಕಾರಿಣಿ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಬಿಜೆಪಿ ನಗರಾಧ್ಯಕ್ಷ ಶ್ರೀವತ್ಸ, ವಕ್ತಾರ ಎಂ.ಎ.ಮೋಹನ್, ನಗರ ಪಾಲಿಕೆಯ ಪ್ರತಿಪಕ್ಷ ನಾಯಕ ಸುಬ್ಬಯ್ಯ ಪತ್ರಿಕಾಗೋಷ್ಠಿಯಲ್ಲಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು