ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ನಗರಾಭಿವೃದ್ಧಿ ಖಾತೆ, ಉಸ್ತುವಾರಿ ಕೇಳುವೆ: ಎಸ್.ಟಿ.ಸೋಮಶೇಖರ್

Last Updated 6 ಆಗಸ್ಟ್ 2021, 5:36 IST
ಅಕ್ಷರ ಗಾತ್ರ

ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನನಗೆ ಯಾವ ಖಾತೆ ಬೇಕು ಎಂದು ಕೇಳಿದರೆ ಬೆಂಗಳೂರು ನಗರಾಭಿವೃದ್ಧಿ ಖಾತೆ ಮತ್ತು ಬೆಂಗಳೂರು ಉಸ್ತುವಾರಿ ಸ್ಥಾನ ಬೇಕು ಎಂದು ಕೇಳುತ್ತೇನೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಸಂಸದ ವಿ.ಶ್ರೀನಿವಾಸಪ್ರಸಾದ್ ಅವರ ಜನ್ಮದಿನದ ಪ್ರಯುಕ್ತ ಇಲ್ಲಿನ ಅವರ ನಿವಾಸಕ್ಕೆ ಶುಕ್ರವಾರ ಭೇಟಿ ನೀಡಿದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು.

ಬಿಬಿಎಂಪಿ ಚುನಾವಣೆ ಹಿನ್ನಲೆಯಲ್ಲಿ ಈ ಖಾತೆ ನನಗೆ ಅಗತ್ಯವಿದೆ. ಆದರೆ ಮುಖ್ಯಮಂತ್ರಿ ಯಾವ ಖಾತೆ ಬೇಕು ಎಂದು ಕೇಳುವುದಿಲ್ಲ, ನಾನೂ ಹೇಳುವುದಿಲ್ಲ ಎಂಬುದೂ ನನಗೆ ಗೊತ್ತಿದೆ‌. ಸುದ್ದಿಗಾರರು ಕೇಳುತ್ತಿರುವುದರಿಂದ, ನಾನು ಈಗ ಹೇಳುತ್ತಿದ್ದೇನೆ ಎಂದರು.

ಮೈಸೂರಿನ ಪ್ರವಾಸಿ ತಾಣಗಳು ತೆರೆದಿರಬೇಕೋ ಅಥವಾ ಮುಚ್ಚಬೇಕೋ ಎಂಬುದರ ಕುರಿತು ಆಗಸ್ಟ್ 7 ರ ಮಧ್ಯಾಹ್ನದ ಒಳಗಡೆ ಈ ಬಗ್ಗೆ ಸಂಪೂರ್ಣ ವರದಿ ಕೊಡುವಂತೆ ಜಿಲ್ಲಾಡಳಿತಕ್ಕೆ ಕೇಳಿದ್ದೇನೆ. ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡಿ ಅಂತಿಮ ನಿರ್ಧಾರ ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಲಾಕ್‌ಡೌನ್‌ನಿಂದ ಜನರಿಗೆ ತೊಂದರೆಯಾಗಿದೆ. ಹೀಗಾಗಿ ಸಂಪೂರ್ಣ ಮುಚ್ಚುವುದು ಕಷ್ಟ. ಜನರಿಗೂ ತೊಂದರೆಯಾಗದಂತೆ, ವ್ಯಾಪಾರಿಗಳಿಗೂ ತೊಂದರೆಯಾಗದಂತೆ ಎಲ್ಲರಿಗೂ ಅನುಕೂಲವಾಗುವ ರೀತಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT