ಶುಕ್ರವಾರ, ಸೆಪ್ಟೆಂಬರ್ 24, 2021
23 °C

ಜಾರಿ ನಿರ್ದೇಶ‌ನಾಲಯದ ದಾಳಿಗೆ ಡಿ.ಕೆ.ಶಿವಕುಮಾರ್ ಕಾರಣ: ಎಸ್.ಟಿ.ಸೋಮಶೇಖರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಎಸ್.ಟಿ.ಸೋಮಶೇಖರ್ ಮತ್ತು ಡಿ.ಕೆ.ಶಿವಕುಮಾರ್‌

ಮೈಸೂರು: ಜಮೀರ್ ಆಹಮದ್ ಪದೇ ಪದೇ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂದು ಹೇಳುತ್ತಿದ್ದುದ್ದರಿಂದ ಡಿ.ಕೆ.ಶಿವಕುಮಾರ್ ಅವರೇ ಜಮೀರ್ ನಿವಾಸದ ಮೇಲೆ ದಾಳಿ ಮಾಡಿಸಿರಬೇಕು ಎಂದು ಎಸ್.ಟಿ.ಸೋಮಶೇಖರ್ ವ್ಯಂಗ್ಯವಾಡಿದರು.

ಡಿ.ಕೆ. ಶಿವಕುಮಾರ್‌ ಅವರಿಗೆ ಜಾರಿ ನಿರ್ದೇಶನಾಲಯ ಹಾಗೂ ಆದಾಯ ತೆರಿಗೆ ಇಲಾಖೆಯ ಸಂಪರ್ಕ ಸಾಕಷ್ಟಿದೆ ಎಂದು ಕುಹಕವಾಡಿದರು.

ಬಿಜೆಪಿ ಇಂತಹ ದಾಳಿ ಮಾಡಿಸುತ್ತಿದೆ ಎಂದು ಕಾಂಗ್ರೆಸ್ ಹೇಳಿದರೆ, ನಾವು  ಹೀಗೆ ಅವರತ್ತಲೆ ಬೆರಳು ಮಾಡಬಹುದಲ್ಲವೇ ಎಂದು ಪ್ರಶ್ನಿಸಿದರು.

ಜಾರಿ ನಿರ್ದೇಶನಾಲಯದವರು ಅವರ ಕೆಲಸ ಮಾಡುತ್ತಾರೆ. ವ್ಯವಹಾರಗಳು ಸರಿ ಇದ್ದಾಗ, ಯಾರು ಅದಕ್ಕೆ ಹೆದರುವ ಅಗತ್ಯವಿಲ್ಲ. ಅಧಿಕಾರಿಗಳಿಗೆ ದಾಖಲೆ ಕೊಟ್ಟರೆ ಸಾಕು. ಕಾಂಗ್ರೆಸ್ ಆರೋಪ ನೋಡಿದರೆ ವ್ಯವಹಾರ ಸರಿ ಇಲ್ಲ ಅನ್ನಿಸುತ್ತದೆ ಎಂದರು.

ಇದನ್ನೂ ಓದಿ: ಮನೆ ನಿರ್ಮಾಣದ ಬಗ್ಗೆ ಯಾರೋ ಕೊಟ್ಟ ದೂರಿನ ಹಿನ್ನೆಲೆಯಲ್ಲಿ ಇ.ಡಿ ದಾಳಿ: ಜಮೀರ್ | Prajavani

ಶಾಸಕ ಜಮೀರ್ ಅಹ್ಮದ್ ಖಾನ್ ಮತ್ತು ಮಾಜಿ ಸಚಿವ ರೋಷನ್‌ ಬೇಗ್‌ ಮನೆ ಮೇಲೆ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ನಡೆಸಿದ್ದ ದಾಳಿ ಶುಕ್ರವಾರ ಬೆಳಗಿನ ಜಾವ ಮುಕ್ತಾಯಗೊಂಡಿದೆ.

ಸತತ 23 ಗಂಟೆಗಳ ಕಾಲ ದಾಖಲೆಗಳ ಹುಡುಕಾಟ, ವಿಚಾರಣೆ ನಡೆಸಿ ಬೆಳಗಿನ ಜಾವ ಅಧಿಕಾರಿಗಳು ವಾಪಸ್ ಹೋಗಿದ್ದಾರೆ. ಕೆಲ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು