ಸೋಮವಾರ, ಆಗಸ್ಟ್ 15, 2022
27 °C

ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ನಗರದ ಕಾಂಗ್ರೆಸ್ ಕಚೇರಿಗೆ ಬುಧವಾರ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. 

ಇಲ್ಲಿನ ಮೆಟ್ರೋಪೋಲ್ ವೃತ್ತದಲ್ಲಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಯುವ ಮೋರ್ಚಾ ಮುಖಂಡರು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಯುವ ಮೋರ್ಚಾ ನಗರ ಘಟಕದ ಅಧ್ಯಕ್ಷ ಕಿರಣ್‌ ಗೌಡ ಮಾತನಾಡಿ, 'ಎಂ.ಲಕ್ಷ್ಮಣ ಅವರು ಮೈಸೂರು ಅಭಿವೃದ್ಧಿ ಕುರಿತು ಬಹಿರಂಗ ಚರ್ಚೆಗೆ ಬನ್ನಿ ಎಂದು ಸಂಸದ ಪ್ರತಾಪ ಸಿಂಹ ಅವರಿಗೆ ಸವಾಲು ಹಾಕಿದ್ದಾರೆ. ಸಿದ್ದರಾಮಯ್ಯ, ಎಚ್‌.ಸಿ.ಮಹದೇವಪ್ಪ ಅವರೊಂದಿಗೆ  ಚರ್ಚೆ ನಡೆಸಲು ಪ್ರತಾಪ ಸಿಂಹ ಸಿದ್ಧರಿದ್ದಾರೆ. ಇದುವರೆಗೂ ಜನರಿಂದ ಆಯ್ಕೆಯಾಗದ ಎಂ.ಲಕ್ಷ್ಮಣ ಅವರೊಂದಿಗೆ ನಾವೇ ಚರ್ಚೆ ನಡೆಸಲಿದ್ದೇವೆ' ಎಂದರು. 

'ಪ್ರತಾಪಸಿಂಹ ಸೇರಿದಂತೆ ಪಕ್ಷದ ಮುಖಂಡರ ವಿರುದ್ಧ ಲಕ್ಷ್ಮಣ್‌ ಹಗುರವಾಗಿ ಮಾತನಾಡುತ್ತಿದ್ದಾರೆ. ಮೂರು ಚುನಾವಣೆಗಳನ್ನು ಸೋತಿರುವ ಅವರಿಗೆ ಸಂಸದರಿಗೆ ಸವಾಲು ಹಾಕುವ ಅರ್ಹತೆಯಿಲ್ಲ. ಮೈಸೂರು ಅಭಿವೃದ್ಧಿಗೆ ಸಂಸದರ ಕೊಡುಗೆಯನ್ನು ನಾವೇ ವಿವರಿಸುತ್ತೇವೆ' ಎಂದರು.

ನಂತರ ಕುರ್ಚಿಗಳನ್ನು ಹೊತ್ತ ಕಾರ್ಯಕರ್ತರು ಕಾಂಗ್ರೆಸ್ ಭವನದತ್ತ ತೆರಳಲು ಮುಂದಾದರು.  ಉದ್ವಿಗ್ನತೆ ನಿಯಂತ್ರಿಸಲು ಅವರನ್ನು ಪೊಲೀಸರು ವಶಕ್ಕೆ ಪಡೆದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು