ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದಲ್ಲಿ ವಾಮಾಚಾರ

Last Updated 14 ಸೆಪ್ಟೆಂಬರ್ 2022, 11:05 IST
ಅಕ್ಷರ ಗಾತ್ರ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸಂವಹನ ಹಾಗೂ ಪತ್ರಿಕೋದ್ಯಮ ಅಧ್ಯಯನ ವಿಭಾಗದಲ್ಲಿ ವಾಮಾಚಾರ ನಡೆದಿದ್ದು, ಈ ಸಂಬಂಧ ವಿಭಾಗದ ಮುಖ್ಯಸ್ಥರು ಕುಲಸಚಿವರಿಗೆ ದೂರು ನೀಡಿದ್ದಾರೆ.

ಸೋಮವಾರ ಕೆಲಸಕ್ಕೆ ಹಾಜರಾದ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ತೇಜಸ್ವಿ ನವಿಲೂರು ಕೊಠಡಿಯ ಬಾಗಿಲು ತೆರೆದು ತಮ್ಮ ಟೇಬಲ್‌ನ ಡ್ರಾಯರ್‌ ಎಳೆದಾಗ ಕೋಳಿ ತಲೆ, ಕಾಲು, ಕುಂಕುಮ, ಕೂದಲು, ಬಳೆ ಚೂರು ಜತೆಗೆ ಫೋಟೊಕತ್ತರಿಸಿರುವುದು ಕಂಡು ಬಂದಿದೆ.

ತೇಜಸ್ವಿ ಅವರು ಕುಲಪತಿ ವಿಶೇಷಾಧಿಕಾರಿ ಗಮನಕ್ಕೆ ತಂದಿದ್ದಾರೆ. ನಂತರ ವಿಭಾಗದ ಮುಖ್ಯಸ್ಥೆ ಹೇಮಲತಾ ಕುಲಸಚಿವರಿಗೆ ದೂರು ನೀಡಿದ್ದಾರೆ.

ತೇಜಸ್ವಿ ನವಿಲೂರು ಅವರು ಸಿದ್ಧಪಾಠ ತಯಾರಿ ವಿಳಂಬ ಮಾಡಿದ್ದರು ಎಂದು ವಿಶ್ವವಿದ್ಯಾಲಯ ಅಮಾನತು ಮಾಡಿತ್ತು. ಸಂಶೋಧನ ವಿದ್ಯಾರ್ಥಿಗಳ ಮನವಿ ಮೇರೆಗೆ ಅಮಾನತು ಆದೇಶ ಹಿಂಪಡೆಯಾಯಿತು. ಕರ್ತವ್ಯಕ್ಕೆ ಹಾಜರಾದ ದಿನವೇ ಈ ಘಟನೆ ನಡೆದಿದೆ.

‘ವಾಮಾಚಾರ ಸಂಬಂಧ ವಿಭಾಗದ ಮುಖ್ಯಸ್ಥರು ಕುಲಸಚಿವರಿಗೆ ದೂರು ನೀಡಿದ್ದಾರೆ. ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT