ಸೋಮವಾರ, ಅಕ್ಟೋಬರ್ 18, 2021
25 °C

ಮೈಸೂರು: ವಾಣಿಜ್ಯ ತೆರಿಗೆ ಇಲಾಖೆ ಕಟ್ಟಡಕ್ಕೆ ಬಾಂಬ್ ಬೆದರಿಕೆ, ತೀವ್ರ ತಪಾಸಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಇಲ್ಲಿನ ವಾಣಿಜ್ಯ ತೆರಿಗೆ ಇಲಾಖೆ ಕಟ್ಟಡಕ್ಕೆ ಪತ್ರದ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಸಿಬ್ಬಂದಿ ಹೊರಗೆ ಬಂದಿದ್ದಾರೆ. 

ಸ್ಥಳಕ್ಕೆ ಬಂದಿರುವ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಶೋಧ ಕಾರ್ಯ ಆರಂಭಿಸಿದ್ದಾರೆ. 

ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಸ್ಥಳಕ್ಕೆ ಬಂದಿದ್ದು, ಸುತ್ತಮುತ್ತ ನಿಂತಿರುವ ಸಾರ್ವಜನಿಕರನ್ನು ಚದುರಿಸುತ್ತಿದ್ದಾರೆ.

ಲಕ್ಷ್ಮೀಪುರಂನ ಜೈನ್‌ಭವನದ ಸಮೀಪ ಇರುವ ಆಡಿಟರ್‌ ಕಚೇರಿಯೊಂದರ ಮುಂದೆ ಟೈಪ್‌ ಮಾಡಿರುವ ಪತ್ರ ಸಿಕ್ಕಿದೆ. ವ್ಯಕ್ತಿಯೊಬ್ಬರು ಈ ಪತ್ರವನ್ನು ಪೊಲೀಸರಿಗೆ ನೀಡಿದ್ದಾರೆ. ಅದರಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಕಟ್ಟಡಕ್ಕೆ ಬಾಂಬ್ ಇಡಲಾಗಿದೆ ಎಂದು ಬರೆಯಲಾಗಿತ್ತು. ಇದರ ಆಧಾರದ ಮೇಲೆ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಪತ್ರ ಸಿಕ್ಕಿರುವ ಆಡಿಟರ್‌ ಕಚೇರಿ ಹಾಗೂ ಆಸುಪಾಸಿನಲ್ಲಿರುವ ಸಿಸಿಟಿವಿ ದೃಶ್ಯಾವಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು