ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಕ್ಷ್ಯಚಿತ್ರ ಪ್ರದರ್ಶನ, ಪುಸ್ತಕ ಮಾರಾಟ

Last Updated 10 ಆಗಸ್ಟ್ 2022, 12:34 IST
ಅಕ್ಷರ ಗಾತ್ರ

ಮೈಸೂರು: ಇಲ್ಲಿನ ಮಾನಸ ಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಬಿ.ಎಂ.ಶ್ರೀ. ಸಭಾಂಗಣದಲ್ಲಿ ‘ಅಮೃತ ಪುಸ್ತಕ ಮಾರಾಟ ಅಭಿಯಾನ’ ಮತ್ತು ಸಾಕ್ಷ್ಯಚಿತ್ರ ಪ್ರದರ್ಶನ ಬುಧವಾರ ನಡೆಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸಾಹಿತ್ಯ ಅಕಾಡೆಮಿ ಮತ್ತು ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಸಹಯೋಗದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ‘ಅಮೃತ ಭಾರತಿಗೆ ಕನ್ನಡದಾರತಿ’ ಅಭಿಯಾನದ ನಿಮಿತ್ತ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸ್ವಾತಂತ್ರ್ಯ ಚಳವಳಿಯನ್ನು ಬಿಂಬಿಸುವ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕಿ ಡಾ.ವಿಜಯಕುಮಾರಿ ಎಸ್.ಕರಿಕಲ್ ಚಾಲನೆ ನೀಡಿದರು. ಪುಸ್ತಕ ಮಾರಾಟವನ್ನು ಪ್ರಾಧ್ಯಾಪಕ ಡಾ.ಎನ್.ಡಿ.ಶಶಿಕಲಾ ಉದ್ಘಾಟಿಸಿದರು.

ಪುಸ್ತಕಗಳನ್ನು ಶೇ.50ರಷ್ಟು ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಇಡಲಾಗಿತ್ತು.

ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯೆ ಡಾ.ವೈ.ಸಿ.ಭಾನುಮತಿ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT