ಮಂಗಳವಾರ, ಏಪ್ರಿಲ್ 13, 2021
32 °C
ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಂಡಲ

13ಕ್ಕೆ ಬೂತ್ ಅಧ್ಯಕ್ಷರ ಕಾರ್ಯಾಗಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಂಡಲದ ಬೂತ್‌ ಅಧ್ಯಕ್ಷರ ಕಾರ್ಯಾಗಾರ ಡಿ.13ರಂದು ನಗರದ ಎಚ್.ಡಿ.ಕೋಟೆ ರಸ್ತೆಯಲ್ಲಿರುವ ಚಿತ್ರವನ ರೆಸಾರ್ಟ್‌ನಲ್ಲಿ ನಡೆಯಲಿದೆ ಎಂದು ಕೆ.ಆರ್.ವಿಧಾನಸಭಾ ಮಂಡಲ ಅಧ್ಯಕ್ಷ ಎಂ.ವಡಿವೇಲು ತಿಳಿಸಿದರು.

‘ಕೃಷ್ಣರಾಜ ವಿಧಾನಸಭಾ ಮಂಡಲವನ್ನು ಸಂಘಟನೆಯಲ್ಲಿ ಮಾದರಿಯನ್ನಾಗಿಸಲು ಈಗಾಗಲೇ 270 ಬೂತ್‌ಗಳಲ್ಲಿ ಅಧ್ಯಕ್ಷರು, ಕಾರ್ಯದರ್ಶಿಗಳನ್ನು ಆಯ್ಕೆ ಮಾಡಲಾಗಿದೆ. ಇವರಿಗೆ ವಿವಿಧ ವಿಷಯಗಳಲ್ಲಿ ತರಬೇತಿ ನೀಡಲಿಕ್ಕಾಗಿ ಈ ಕಾರ್ಯಾಗಾರ ಆಯೋಜಿಸಿದ್ದೇವೆ’ ಎಂದು ಶುಕ್ರವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಕಾರ್ಯಾಗಾರ ಉದ್ಘಾಟಿಸಿ, ಬಿಜೆಪಿ ಇತಿಹಾಸ ಮತ್ತು ಪಕ್ಷ, ದೇಶಕ್ಕಾಗಿ ನನ್ನ ಕರ್ತವ್ಯದ ವಿಷಯದ ಕುರಿತು ಮಾತನಾಡಲಿದ್ದಾರೆ’ ಎಂದು ವಡಿವೇಲು ಮಾಹಿತಿ ನೀಡಿದರು.

‘ಅಯೋಧ್ಯೆಯ ರಾಮ ಮಂದಿರದ ನಿರ್ಮಾಣದಲ್ಲಿ ಸಮಾಜದ ಸಹಭಾಗಿತ್ವ ಮತ್ತು ನನ್ನ ಪಾತ್ರ’ ವಿಷಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜಿಲ್ಲಾ ಪ್ರಚಾರಕ ಗುರುದತ್‌ ವಿಷಯ ಮಂಡಿಸಿದರೆ, ಬೂತ್ ಅಧ್ಯಕ್ಷರು, ಬಿಎಲ್‌ಎಗಳ ಪ್ರಾಮುಖ್ಯತೆ ಮತ್ತು ಸಾಮಾಜಿಕ ಜವಾಬ್ದಾರಿ, ಮತದಾರರ ಪಟ್ಟಿಯ ಪೇಜ್ ಪ್ರಮುಖರ ಆಯ್ಕೆ ಮತ್ತು ಸಮಾಜದಲ್ಲಿ ಅವರ ಪಾತ್ರದ ಬಗ್ಗೆ ಶಾಸಕ ಎಸ್‌.ಎ.ರಾಮದಾಸ್‌ ಮಾತನಾಡಲಿದ್ದಾರೆ ಎಂದರು.

ಮಂಡಲ ಪ್ರಧಾನ ಕಾರ್ಯದರ್ಶಿ ನೂರ್ ಫಾತಿಮಾ ಮಾತನಾಡಿ, ‘ಕಾರ್ಯಾಗಾರದಲ್ಲಿ ಕೇಂದ್ರ–ರಾಜ್ಯ ಸರ್ಕಾರಗಳ ಕಾರ್ಯಕ್ರಮಗಳ ಅನುಷ್ಠಾನ ಮತ್ತು ನನ್ನ ಹೊಣೆ, ಯೋಜನೆಗಳ ಅನುಷ್ಠಾನದಿಂದ ಸಮೂಹ ಅಭಿವೃದ್ಧಿ, ಸಮಾಜದ ಸಹಭಾಗಿತ್ವ ಬಗ್ಗೆ ಚರ್ಚಿಸಲಾಗುತ್ತದೆ’ ಎಂದು ಹೇಳಿದರು.

ಪಾಲಿಕೆ ಸದಸ್ಯ ಬಿ.ವಿ.ಮಂಜುನಾಥ್, ಮಂಡಲದ ಪ್ರಧಾನ ಕಾರ್ಯದರ್ಶಿ ಜೆ.ನಾಗೇಂದ್ರ ಕುಮಾರ್, ಉಪಾಧ್ಯಕ್ಷರಾದ ಎಂ.ಆರ್.ಬಾಲಕೃಷ್ಣ, ಸಂತೋಷ್ ಶಂಭು ಪತ್ರಿಕಾಗೋಷ್ಠಿಯಲ್ಲಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು