ಶನಿವಾರ, ಅಕ್ಟೋಬರ್ 24, 2020
22 °C

ಕಾಲುಜಾರಿ ಕಬಿನಿ ನಾಲೆಗೆ ಬಿದ್ದ ಬಿಎಸ್‌ಪಿ ಅಧ್ಯಕ್ಷನಿಗಾಗಿ ಹುಡುಕಾಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಂಜನಗೂಡು: ಭಾನುವಾರ ಬೆಳಿಗ್ಗೆ ವಾಯುವಿಹಾರಕ್ಕೆ ಹೋಗಿದ್ದಾಗ ಕಾಲು ಜಾರಿ ಮಾಡ್ರಹಳ್ಳಿ ಬಳಿ ಕಬಿನಿ ಬಲದಂಡೆ ಕಾಲುವೆಗೆ ಬಿ.ಎಸ್.ಪಿ. ತಾಲ್ಲೂಕು ಘಟಕದ ಅಧ್ಯಕ್ಷ ಎಂ.ರಾಮಚಂದ್ರ (45) ಬಿದ್ದಿದ್ದಾರೆ ಎನ್ನಲಾಗಿದೆ.

ಸಿಂಗಾರಿಪುರ ಗ್ರಾಮದ ನಿವಾಸಿ ರಾಮಚಂದ್ರ ಅವಿವಾಹಿತರಾಗಿದ್ದು, ಸಾಮಾಜಿಕ ಹೋರಾಟಗಾರರಾಗಿದ್ದರು. ಮುಂಜಾನೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಕಾಲು ತೊಳೆಯಲು ನಾಲೆಗೆ ಇಳಿದಾಗ ಈ ದುರ್ಘಟನೆ ನಡೆದಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ರಾಮಚಂದ್ರ ಅವರ ಪತ್ತೆಗಾಗಿ ಹುಡುಕಾಟ ನಡೆದಿದ್ದು ಭಾನುವಾರ ರಾತ್ರಿಯವರೆಗೆ ಪತ್ತೆಯಾಗಿಲ್ಲ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.