ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರಿನಲ್ಲಿ ಕರ್ನಾಟಕ ಆರ್ಯವೈಶ್ಯ ಮಹಾಸಭಾದ ಬಹುಪಯೋಗಿ ಕಟ್ಟಡಕ್ಕೆ ಭೂಮಿಪೂಜೆ

ಕರ್ನಾಟಕ ಆರ್ಯವೈಶ್ಯ ಮಹಾಸಭಾದ ವತಿಯಿಂದ
Last Updated 30 ಆಗಸ್ಟ್ 2020, 9:29 IST
ಅಕ್ಷರ ಗಾತ್ರ

ಮೈಸೂರು: ಕರ್ನಾಟಕ ಆರ್ಯವೈಶ್ಯ ಮಹಾಸಭಾದ ವತಿಯಿಂದ ಇಲ್ಲಿನ ಲಷ್ಕರ್ ಮೊಹಲ್ಲಾದಲ್ಲಿ ಬಹುಪಯೋಗಿ ಕಟ್ಟಡಕ್ಕೆ ಬಿಜೆಪಿ ಮುಖಂಡ ಡಿ.ಎಚ್.ಶಂಕರಮೂರ್ತಿ ಭಾನುವಾರ ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಮಹಾಸಭಾ ರಾಜ್ಯದಲ್ಲಿ ಅತ್ಯುತ್ತಮವಾದ ಕಾರ್ಯ ನಿರ್ವಹಿಸುತ್ತಿದೆ ಎಂದು ಶ್ಲಾಘಿಸಿದರು.

ಇದರ ಅಧ್ಯಕ್ಷರಾದ ಆರ್.ಪಿ.ರವಿಶಂಕರ್ 76 ಬಾರಿ ರಕ್ತದಾನ ಮಾಡುವ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದಾರೆ. ಇಂತಹವರ ನೇತೃತ್ವದಲ್ಲಿ ಸಮಾಜದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಉಚಿತ ತರಬೇತಿ ಕೇಂದ್ರ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿದೆ ಎಂದು ಹೇಳಿದರು.

ಇದಕ್ಕೂ ಮುನ್ನ ಮಾತನಾಡಿದ ಶಾಸಕ ಎಚ್.ಪಿ.ಮಂಜುನಾಥ್, ‘ಮಹಾಸಭಾವು ಕೊರೊನಾದಂತಹ ಸಂಕಷ್ಟದ ಸಮಯದಲ್ಲಿ 6 ಸಾವಿರ ಯೂನಿಟ್‌ನಷ್ಟು ರಕ್ತವನ್ನು ಸಂಗ್ರಹಿಸಿತು. ಅನೇಕ ಸಮಾಜಮುಖಿ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿರುವುದು ಹೆಮ್ಮೆಯ ವಿಷಯ’ ಎಂದರು.

ಸಂಸದ ಪ್ರತಾಪಸಿಂಹ, ಶಾಸಕ ಎಲ್.ನಾಗೇಂದ್ರ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ರಾಜೀವ್, ಪಾಲಿಕೆ ಸದಸ್ಯ ಸಿ.ರಮೇಶ್ (ರಮಣಿ), ಮಹಾಸಭಾದ ಅಧ್ಯಕ್ಷ ಆರ್.ಪಿ.ರವಿಶಂಕರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT