ಶನಿವಾರ, 3 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಬಸ್ಸು–ಗೂಡ್ಸ್‌ ಆಟೊ ಡಿಕ್ಕಿ; ಮೂವರ ಸಾವು

Last Updated 10 ಅಕ್ಟೋಬರ್ 2021, 14:39 IST
ಅಕ್ಷರ ಗಾತ್ರ

ಮೈಸೂರು: ತಾಲ್ಲೂಕಿನ ವರಕೋಡು ಗ್ರಾಮದ ಮೈಸೂರು–ತಿ.ನರಸೀಪುರ ಹೆದ್ದಾರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ – ಗೂಡ್ಸ್‌ ಆಟೊ ನಡುವೆ ಭಾನುವಾರ ಸಂಜೆ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ತಿ.ನರಸೀಪುರದ ನಿವಾಸಿಗಳಾದ ಇಮ್ರಾನ್‌ (30), ಯಾಸ್ಮೀನ್‌ ತಾಜ್‌ (28) ಹಾಗೂ ಅಫ್ನಾನ್‌ (3) ಮೃತಪಟ್ಟವರು. ಅಕ್ಬರ್‌ ಪಾಷಾ, ಬಾಬು ಮತ್ತು ಶಬಾನಾ ಗಾಯಗೊಂಡವರು.

ತಿ.ನರಸೀಪುರದಿಂದ ಮೈಸೂರಿನತ್ತ ಬರುತ್ತಿದ್ದ ಆಟೊ ಹಾಗೂ ಮೈಸೂರಿನಿಂದ ತಿ.ನರಸೀಪುರ ಕಡೆಗೆ ಹೋಗುತ್ತಿದ್ದ ಬಸ್‌, ವರಕೋಡು ಗ್ರಾಮದ ಪೇಪರ್‌ ಮಿಲ್‌ ಸಮೀಪದ ತಿರುವಿನಲ್ಲಿ ಮುಖಾಮುಖಿ ಡಿಕ್ಕಿಯಾಗಿವೆ.

ಈ ಸಂಬಂಧ ವರುಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT