ಮಂಗಳವಾರ, ಜನವರಿ 28, 2020
22 °C
ಗೋಲಿಬಾರ್ ಘಟನೆ ಕುರಿತು ನ್ಯಾಯಾಂಗ ತನಿಖೆಗೆ ಸಾ.ರಾ.ಮಹೇಶ್ ಆಗ್ರಹ

ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ಜೆಡಿಎಸ್‌ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ಜೆಡಿಎಸ್‌ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು, ಕೂಡಲೇ ಕಾಯ್ದೆಯನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಶಾಸಕ ಸಾ.ರಾ.ಮಹೇಶ್, ‘ನಮಗೆ ಸ್ವಾಯತ್ತ ಸಂಸ್ಥೆಗಳ ಮೇಲೆ ನಂಬಿಕೆ ಇಲ್ಲ. ಗೋಲಿಬಾರ್ ಘಟನೆ ಕುರಿತು ಸಿಐಡಿ ತನಿಖೆ ಬದಲು ನ್ಯಾಯಾಂಗ ತನಿಖೆಯಾಗಬೇಕು’ ಎಂದು ಒತ್ತಾಯಿಸಿದರು.

ಮೊದಲು ಈ ಕಾಯ್ದೆಯ ಕುರಿತು ಸಮಗ್ರ ಮಾಹಿತಿಯನ್ನು ಸರ್ಕಾರ ಸಾರ್ವಜನಿಕರಿಗೆ ನೀಡಬೇಕಿತ್ತು. ಅದರ ಬದಲು ಏಕಾಏಕಿ ಜಾರಿಗೆ ತರುವ ಮೂಲಕ ಸರ್ವಾಧಿಕಾರಿ ಧೋರಣೆ ಪ್ರದರ್ಶಿಸಿದೆ ಎಂದು ಹರಿಹಾಯ್ದರು.

ಈ ಕಾಯ್ದೆಯಲ್ಲಿ ಹಲವು ನ್ಯೂನತೆಗಳಿವೆ. ಇವುಗಳನ್ನು ಸರಿಪಡಿಸಿರಿ ಎಂದು ಎಲ್ಲೆಡೆ ಪ್ರತಿಭಟನೆ ನಡೆಸಲಾಗುತ್ತಿದೆ. ಕೂಡಲೇ ಸರ್ಕಾರ ಈ ಮನವಿಯನ್ನು ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆ ಮಾಡುವ ಮುನ್ನವೇ ನಿಷೇಧಾಜ್ಞೆ ಹೇರಲಾಗುತ್ತಿದೆ. ಈ ಮೂಲಕ ಪ್ರತಿಭಟನೆಯ ಹಕ್ಕನ್ನೇ ಕಿತ್ತುಕೊಳ್ಳುತ್ತಿದ್ದಾರೆ. ಇದು ಸರಿಯಲ್ಲ ಎಂದು ಟೀಕಿಸಿದರು.

ಪ್ರತಿಭಟನೆ ಮಾಡಿದರೆ ಗೋಲಿಬಾರ್ ಮಾಡುತ್ತಾರೆ. ರಾಜಕೀಯ ನಾಯಕರು ಮೃತಪಟ್ಟವರ ಕುಟುಂಬಕ್ಕೆ ಸಾಂತ್ವನ ಹೇಳಲು ಹೊರಟರೆ ಅವರನ್ನು ತಡೆಯುತ್ತಾರೆ. ನಂತರ, ಸರ್ಕಾರವೇ ಪರಿಹಾರ ನೀಡುತ್ತದೆ. ಇದೇನು ಎಂಬುದೇ ಅರ್ಥವಾಗುತ್ತಿಲ್ಲ ಎಂದು ಕಿಡಿಕಾರಿದರು.

ಶಾಸಕ ಅಶ್ವಿನ್‌ಕುಮಾರ್, ಉಪಮೇಯರ್ ಶಫಿ ಮಹಮ್ಮದ್, ಪಾಲಿಕೆ ಸದಸ್ಯರಾದ ಪ್ರೇಮಾ ಶಂಕರೇಗೌಡ, ರೇಷ್ಮಾ ಬಾನು, ನರ್ಮತಾ ರಮೇಶ್, ಮುಖಂಡರಾದ ಕೆ.ವಿ.ಮಲ್ಲೇಶ್, ಆರ್.ಲಿಂಗಪ್ಪ ಸೇರಿದಂತೆ ಹಲವು ಮುಖಂಡರು ಇದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು