ಸೋಮವಾರ, ಸೆಪ್ಟೆಂಬರ್ 20, 2021
22 °C

ಎಚ್.ಡಿ.ಕೋಟೆ: ಹುಲಿ ಸೆರೆಗೆ ಕಾರ್ಯಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಎಚ್.ಡಿ.ಕೋಟೆ: ತಾಲ್ಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕಾಡಂಚಿನ ಗ್ರಾಮವಾದ ಮೂರ್‌ಬಾಂ‌ದ್‌ ಸುತ್ತಮುತ್ತ ಹುಲಿ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಗುರುವಾರ ಕಾರ್ಯಾಚರಣೆ ನಡೆಸಿದರು.

ರಾಂಪುರ ಆನೆ ಶಿಬಿರದಿಂದ ‘ಗಣೇಶ’, ‘ಪಾರ್ಥ’ ಮತ್ತು ‘ಜಯಪ್ರಕಾಶ‌’ ಆನೆಗಳ ನೆರವಿನಿಂದ ಗುರುವಾರ ಕಾರ್ಯಾಚರಣೆ ನಡೆಸಲಾಯಿತು. ಗ್ರಾಮದಲ್ಲಿ ಏಳು ದಿನಗಳ ಹಿಂದೆ ಹುಲಿ ಕಾಣಿಸಿಕೊಂಡು ಹಸುವೊಂದನ್ನು ತಿಂದುಹಾಕಿತ್ತು. ಈ ಬಗ್ಗೆ ಮಾಹಿತಿ ಪಡೆದ ವಲಯ ಅರಣ್ಯಾಧಿಕಾರಿ ಪಿ.ಎಸ್.‌ ಚೇತನ್‌ ಮತ್ತು ಸಿಬ್ಬಂದಿ, ಹುಲಿ ಪತ್ತೆಗೆ ಕೂಂಬಿಂಗ್ ನಡೆಸಿದ್ದಾರೆ.

ಕೆಂಚನಹಳ್ಳಿ ಗ್ರಾಮದಲ್ಲಿ ಹುಲಿ ಕಂಡು ಬಂದಿದ್ದು, ಅಲ್ಲೂ ಕಾರ್ಯಾ ಚರಣೆ ಮಾಡಲಾಯಿತು. ನಂತರ ಕಳಸೂರಿನಲ್ಲಿ ಕಾಣಿಸಿ ಕೊಂಡಿತ್ತು. ಹುಲಿ ಪತ್ತೆಗೆ ಅಳವಡಿಸಿರುವ ಕ್ಯಾಮೆರಾದಲ್ಲಿ ಹುಲಿ ಪತ್ತೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.