ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತ ವಿರೋಧಿ ಮಸೂದೆ ರದ್ದತಿಗೆ ಆಗ್ರಹ

ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ಕಾಂಗ್ರೆಸ್ ಮುಖಂಡರು
Last Updated 4 ಅಕ್ಟೋಬರ್ 2020, 3:05 IST
ಅಕ್ಷರ ಗಾತ್ರ

ಮೈಸೂರು: ರೈತರು ಮತ್ತು ಕಾರ್ಮಿಕರ ಪಾಲಿಗೆ ಮಾರಕವಾಗಿರುವ ಮಸೂದೆ ಗಳನ್ನು ರದ್ದುಪಡಿಸುವಂತೆ ಕೋರಿ ಮೈಸೂರು ನಗರ ಮತ್ತು ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.

ಶನಿವಾರ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿದ ಪಕ್ಷದ ಮುಖಂಡರು ಮನವಿ ಪತ್ರವನ್ನು ರೋಹಿಣಿ ಸಿಂಧೂರಿ ಅವರಿಗೆ ನೀಡಿದರು.

ರೈತರು, ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಮಸೂದೆ, ಬೆಲೆ ಖಾತರಿ ಕೃಷಿ ಸೇವೆಗಳ ಮಸೂದೆ, ಅಗತ್ಯ ಸರಕುಗಳ (ತಿದ್ದುಪಡಿ) ಮಸೂದೆಗಳು ರೈತರ ಪಾಲಿಕೆ ಕರಾಳವಾಗಿ ಪರಿಣಮಿಸಿವೆ. ಇವುಗಳನ್ನು ರದ್ದುಪಡಿಸಬೇಕು
ಎಂದು ಅವರು ಆಗ್ರಹಿಸಿದರು.

ಪಕ್ಷದ ಮುಖಂಡ ವಾಸು ಮಾತನಾಡಿ, ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ರೈತ ವಿರೋಧಿ ಕಾನೂನುಗಳನ್ನು ಜಾರಿಗೊಳಿಸುವ ಮೂಲಕ ಹಸಿರು ಕ್ರಾಂತಿಯನ್ನು ಇಲ್ಲವಾಗಿಸಲು ಸಂಚು ರೂಪಿಸಿದೆ ಎಂದು ಟೀಕಿಸಿದರು.

ರೈತ ವಿರೋಧಿ ಮಸೂದೆಗಳನ್ನು ವಿರೋಧಿಸಿ ದೇಶದಾದ್ಯಂತ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಬಂಡವಾಳಶಾಹಿಗಳ ಪರವಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಪ್ರತಿಭಟನೆ ಕಾಣದಂತೆ ನಟಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ರಾಷ್ಟ್ರಪತಿ ಮಧ್ಯಪ್ರವೇಶಿಸಿ ಈ ಮಸೂದೆಗಳನ್ನು ವಾಪಸ್‌ ಪಡೆಯು ವಂತೆ ಆದೇಶಿಸಬೇಕು. ಮೋದಿ ಸರ್ಕಾ ರದ ಈ ನಡೆಯನ್ನು ಕೃಷಿಕ ಸಮುದಾಯ ಎಂದೂ ಕ್ಷಮಿಸದು ಎಂದರು.

ಮುಖಂಡ ಎಂ.ಕೆ.ಸೋಮಶೇಖರ್, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ, ಚಂದ್ರಶೇಖರ್, ಶಿವಣ್ಣ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT