ಗುರುವಾರ , ಜೂನ್ 24, 2021
27 °C

ನಂಜನಗೂಡು: ಕಾಡುಬೆಕ್ಕು ಸೆರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನಂಜನಗೂಡು: ದೇವನೂರು ಗ್ರಾಮದ ಹೊರವಲಯದ ಜಮೀನಿನಲ್ಲಿ ಕಾಣಿಸಿಕೊಂಡ ಕಾಡು ಬೆಕ್ಕನ್ನು ಬುಧವಾರ ಅರಣ್ಯ ಇಲಾಖೆ ಸಿಬ್ಬಂದಿ ಬಲೆ ಬೀಸಿ ಹಿಡಿದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟರು.

ಕಳೆದ ಮೂರು ದಿನಗಳಿಂದ ಗ್ರಾಮದಲ್ಲಿ ಕಾಣಿಸಿಕೊಳ್ಳುತ್ತಿದ್ದ ಕಾಡು ಬೆಕ್ಕನ್ನು ಚಿರತೆ ಎಂದು ಭಾವಿಸಿದ್ದ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಅರಣ್ಯ ಸಿಬ್ಬಂದಿ ಬಲೆ ಬೀಸಿ ಹಿಡಿದಾಗ ಕಾಡು ಬೆಕ್ಕು ಸೆರೆಯಾಯಿತು.

‘ಕಾಡು ಬೆಕ್ಕು ಮನುಷ್ಯರ ಮೇಲೆ ದಾಳಿ ಮಾಡುವ ಪ್ರಾಣಿಯಲ್ಲ ಎಂದು ಗ್ರಾಮಸ್ಥರಿಗೆ ಮನವರಿಕೆ ಮಾಡಿದೆವು. ನಂತರ ಕೋಣನೂರು ಸಮೀಪದ ಕುರುಚಲು ಅರಣ್ಯ ಪ್ರದೇಶಕ್ಕೆ ಬಿಡಲಾಯಿತು’ ಎಂದು ಆರ್‌.ಎಫ್‍.ಒ ರಕ್ಷಿತ್ ‘ಪ್ರಜಾವಾಣಿ’ಗೆ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು