ಶನಿವಾರ, ಮಾರ್ಚ್ 25, 2023
26 °C

ಹುಲಿ ಬೇಟೆಗಾರರ ಸೆರೆ: ಸಚಿವ ಪ್ರಕಾಶ್ ಜಾವಡೇಕರ್‌ ಮೆಚ್ಚುಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಚಿವ ಪ್ರಕಾಶ್ ಜಾವಡೇಕರ್‌

ಮೈಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಕಲ್ಲಳ್ಳಿ ವಲಯದಲ್ಲಿ ಈಚೆಗೆ ಹುಲಿಯೊಂದನ್ನು ಗುಂಡಿಟ್ಟು ಕೊಂದಿದ್ದ ಐವರು ಆರೋಪಿಗಳನ್ನು ಬಂಧಿಸಿರುವ ಅರಣ್ಯಾಧಿಕಾರಿಗಳ ಕಾರ್ಯವನ್ನು ಶ್ಲಾಘಿಸಿ ಕೇಂದ್ರ ಪರಿಸರ ಹಾಗೂ ಅರಣ್ಯ ಸಚಿವ ಪ್ರಕಾಶ್ ಜಾವಡೇಕರ್‌ ಟ್ವೀಟ್‌ ಮಾಡಿದ್ದಾರೆ.

‘ಕಡಿಮೆ ಅವಧಿಯಲ್ಲಿ ಉತ್ತಮ ಕೆಲಸ ಮಾಡಿದ್ದೀರಿ. ಇದಕ್ಕಾಗಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಇಲಾಖೆ ಸಿಬ್ಬಂದಿ, ಅಧಿಕಾರಿಗಳಿಗೆ ಅಭಿನಂದನೆಗಳು’ ಎಂದಿದ್ದಾರೆ.

ಆರೋಪಿಗಳ ಪತ್ತೆಗಾಗಿ ಬಂಡೀಪುರ ರಾಷ್ಟ್ರೀಯ ಉದ್ಯಾನದಿಂದ ‘ರಾಣಾ’ ಎಂಬ ಶ್ವಾನವನ್ನು ಕರೆ ತರಲಾಗಿತ್ತು. ಅನುಮಾನ ಬಂದ ಪ್ರದೇಶಕ್ಕೆ ತೆರಳಿ ಪರಿಶೀಲಿಸಿದಾಗ ಈ ಶ್ವಾನವು ಮೊದಲಿಗೆ ಸಂತೋಷ್ ಎಂಬಾತನ ಮನೆಗೆ ಹೋಗಿದೆ. ಅಲ್ಲಿ ಒಂದೂವರೆ ಕೆ.ಜಿಯಷ್ಟು ಜಿಂಕೆ ಮಾಂಸ ಪತ್ತೆಯಾಗಿದೆ. ಸಂತೋಷ್‌ನನ್ನು ವಿಚಾರಣೆಗೆ ಒಳಪಡಿಸಿದಾಗ ಹುಲಿ ಬೇಟೆಯಾಡಿರುವುದು ಗೊತ್ತಾಗಿದೆ.

ಆರೋಪಿಗಳಿಂದ ಹುಲಿಯ 13 ಉಗುರು ಹಾಗೂ 2 ಕೋರೆ ಹಲ್ಲು ಸೇರಿದಂತೆ 2 ಬೈಕ್ ಮತ್ತು ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು