ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಕಾರು-ಬೈಕ್ ಅಪಘಾತ; ಇಬ್ಬರು ಸಾವು

Last Updated 22 ನವೆಂಬರ್ 2021, 9:46 IST
ಅಕ್ಷರ ಗಾತ್ರ

ಮೈಸೂರು: ತಾಲ್ಲೂಕಿನ ಸಾಗರಕಟ್ಟೆ ಸಮೀಪ ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಮೃತಪಟ್ಟಿದ್ದು, ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.

ಹೊಸಕೋಟೆ ಗ್ರಾಮದ ನಿವಾಸಿಗಳಾದ ವಿಶ್ವ (22) ಹಾಗೂ ವಿಷ್ಣು (20) ಮೃತಪಟ್ಟವರು.

ಇವರು ಹೊಸಕೋಟೆಯಿಂದ ಕೆ.ಆರ್.ನಗರಕ್ಕೆ ಬೈಕಿನಲ್ಲಿ ತೆರಳುವಾಗ ಎದುರಿನಿಂದ ಬಂದ ಕಾರಿಗೆ ಮುಖಾಮುಖಿ ಡಿಕ್ಕಿಯಾಗಿದೆ. ಕಾರು ಚಾಲಕನ ಸ್ಥಿತಿ ತೀರಾ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದಾರೆ. ಸದ್ಯ ಅವರು ಮಾತನಾಡುವ ಸ್ಥಿತಿಯಲ್ಲಿ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಇಲವಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT