ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮುಂಡಿ ಬೆಟ್ಟದಲ್ಲಿ ರಥೋತ್ಸವ: ಬೆಟ್ಟಕ್ಕೆ ಪ್ರವೇಶ ನಿರ್ಬಂಧ

Last Updated 28 ಅಕ್ಟೋಬರ್ 2020, 5:00 IST
ಅಕ್ಷರ ಗಾತ್ರ

ಮೈಸೂರು: ರಥೋತ್ಸವ ಹಿನ್ನೆಲೆಯಲ್ಲಿ ಅ.28 ರ ಸಂಜೆ 6 ರಿಂದ ಅ.29 ರ ಮಧ್ಯಾಹ್ನ 12 ಗಂಟೆವರೆಗೆ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.

ಕೋವಿಡ್-19 ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ಅವಧಿಯಲ್ಲಿ ದರ್ಶನ ಪಡೆಯಲು ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ. ಅಲ್ಲದೇ, ಮೆಟ್ಟಿಲುಗಳ ಮೂಲಕ ಬೆಟ್ಟಕ್ಕೆ ತೆರಳುವುದನ್ನೂ ನಿಷೇಧಿಸಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶಿಸಿದ್ದಾರೆ.

ಅ.29ರಂದು ಬೆಳಿಗ್ಗೆ 9.45ರಿಂದ 10.05ರವರೆಗೆ ಬೆಟ್ಟದಲ್ಲಿ ಚಾಮುಂಡೇಶ್ವರಿ ರಥೋತ್ಸವ ನಡೆಯಲಿದೆ. ಹೀಗಾಗಿ, ಜನದಟ್ಟಣೆ ತಪ್ಪಿಸಲು ಈ ನಿರ್ಧಾರ ಕೈಗೊಂಡಿದ್ದಾರೆ.

ಶಿಷ್ಟಾಚಾರ ವ್ಯವಸ್ಥೆ ಹೊಂದಿರುವ ಗಣ್ಯ ವ್ಯಕ್ತಿಗಳು, ಸರ್ಕಾರಿ ಕೆಲಸದ ನಿಮಿತ್ತ ತೆರಳುವ ಅಧಿಕಾರಿಗಳು ಮತ್ತು ತುರ್ತು ಸೇವಾ ವಾಹನಗಳು ಹಾಗೂ ಗ್ರಾಮಸ್ಥರ ವಾಹನಗಳನ್ನು ಹೊರತುಪಡಿಸಿ ಸಾರ್ವಜನಿಕರ ವಾಹನ ಮತ್ತು ಖಾಸಗಿ ವಾಹನ ಗಳು ಬೆಟ್ಟಕ್ಕೆ ಬರುವುದನ್ನು ನಿಷೇಧಿಸಲಾಗಿದೆ.

ಅಲ್ಲದೆ, ಆ ದಿನದಂದು ದೇವಾಲಯದ ವತಿಯಿಂದ ಮತ್ತು ದಾನಿಗಳಿಂದ ಸಾಮೂಹಿಕವಾಗಿ ಹಾಗೂ ಸಾರ್ವಜನಿಕವಾಗಿ ಪ್ರಸಾದ ತಯಾರಿಸುವುದು, ವಿತರಿಸುವುದನ್ನು ನಿರ್ಬಂಧಿಸಲಾಗಿದೆ.

ದೇವಾಲಯದಲ್ಲಿ ಜರುಗುವ ರಥೋತ್ಸವ ಸಂಬಂಧಿತ ಧಾರ್ಮಿಕ ಕಾರ್ಯಕ್ರಮಗಳು ಸಾಂಪ್ರದಾಯಿಕವಾಗಿ ದೇವಾಲಯದ ಅರ್ಚಕರು ಮತ್ತು ಸಿಬ್ಬಂದಿಯವರ ಉಪಸ್ಥಿತಿಯಲ್ಲಿ ನಡೆಸಬಹುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT